ETV Bharat / state

2022 - 23ನೇ ಶೈಕ್ಷಣಿಕ ವರ್ಷದಿಂದ ಸಿದ್ದಗಂಗಾ ವೈದ್ಯಕೀಯ ಕಾಲೇಜು ಆರಂಭ.. ಶ್ರೀ ಸಿದ್ದಲಿಂಗ ಸ್ವಾಮೀಜಿ - Sri Siddalinga Swamiji

ತುಮಕೂರಿನ ಸಿದ್ದಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಈ ಹಿನ್ನೆಲೆ 2022-23ನೇ ಶೈಕ್ಷಣಿಕ ವರ್ಷದಿಂದ ತುಮಕೂರಿನಲ್ಲಿ ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.

Sri Siddalinga Swamiji
ಶ್ರೀ ಸಿದ್ದಲಿಂಗ ಸ್ವಾಮೀಜಿ
author img

By

Published : Aug 27, 2022, 2:18 PM IST

ತುಮಕೂರು: ಕೇಂದ್ರ ಸರ್ಕಾರ ವೈದ್ಯಕೀಯ ಕಾಲೇಜು ಪ್ರಾರಂಭ ಮಾಡಲು ನಿಯಮ ಮತ್ತು ನಿಬಂಧನೆಗಳನ್ನು ಪುರಸ್ಕರಿಸಿರುವುದರಿಂದ 2022-23ನೇ ಶೈಕ್ಷಣಿಕ ವರ್ಷದಿಂದ ತುಮಕೂರಿನಲ್ಲಿ ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.

ಈಗಾಗಲೇ ಕೇಂದ್ರ ತಂಡವು ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯಲ್ಲಿರುವ ಮೂಲಸೌಕರ್ಯ ಮತ್ತು ಅಧ್ಯಾಪಕ ವೃಂದಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಂಸ್ಥೆಯು ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಅರ್ಹವಾಗಿದೆ ಎಂದು ಶಿಫಾರಸು ಮಾಡಿದೆ. ಇದರ ಆಧಾರದ ಮೇಲೆ ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಮೌಲ್ಯಮಾಪಕರು ಸಂಸ್ಥೆಗೆ ಅನಿರೀಕ್ಷಿತ ಭೇಟಿ ನೀಡಿ ಮೌಲ್ಯಮಾಪನ ಮಾಡಿದ್ದರು. ಹೀಗಾಗಿ, ಪ್ರಸ್ತುತ ಶೈಕ್ಷಣಿಕ ವರ್ಷದಿಂದ 150 ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿ

ಕಳೆದ ವರ್ಷ ರಾಜ್ಯ ಸರ್ಕಾರವು ಸಿದ್ದಗಂಗಾ ಮಠಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ನಿರಪೇಕ್ಷಣಾ ಪತ್ರ ನೀಡಿತ್ತು. ಸಿದ್ದಗಂಗಾ ಮಠಕ್ಕೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದರಿಂದ ತುಮಕೂರು ಜಿಲ್ಲೆಗೆ ಒಟ್ಟು 3 ಮೆಡಿಕಲ್ ಕಾಲೇಜು ಸಿಕ್ಕಂತಾಗಿದೆ. ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಸಂಸ್ಥೆಗೆ ಸೇರಿದ 2 ಮೆಡಿಕಲ್ ಕಾಲೇಜುಗಳು ಈಗಾಗಲೇ ಕಾರ್ಯಾರಂಭ ಮಾಡುತ್ತಿವೆ.

ಇದನ್ನೂ ಓದಿ: EXCLUSIVE: ಸಿದ್ದಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ ಕೇಂದ್ರ ಸರ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.