ETV Bharat / state

ಸಿದ್ದಗಂಗಾ ಶ್ರಿಗಳ ಎರಡನೇ ವರ್ಷದ ಪುಣ್ಯ ಸ್ಮರಣೆ: ಮಠದ ಕಾರ್ಯಕ್ರಮದಲ್ಲಿ ಸಿಎಂ ಭಾಗಿ - ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

ಇಂದು ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಎರಡನೇ ವರ್ಷದ ಪುಣ್ಯಸ್ಮರಣೆ, ಈ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಸ್ಮರಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿ, ಭಾಗಿಯಾಗಿದ್ದರು.

ಸಿದ್ದಗಂಗಾ ಶ್ರಿಗಳ ಎರಡನೇ ವರ್ಷದ ಪುಣ್ಯ ಸ್ಮರಣೆ
Siddaganga Shivakumara swamiji second death anniversary
author img

By

Published : Jan 21, 2021, 12:22 PM IST

ತುಮಕೂರು: ಇಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯ ಎರಡನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಠದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಿಎಂ ಯೂಡಿಯೂರಪ್ಪ ಚಾಲನೆ ನೀಡಿದರು.

ಸಿದ್ದಗಂಗಾ ಮಠದಲ್ಲಿ ನಡೆದ ಸ್ಮರಣೋತ್ಸ ಕಾರ್ಯಕ್ರಮ

ನಡೆದಾಡುವ ದೇವರು ಎಂದೇ ಖ್ಯಾತಿ ಹೊಂದಿದ್ದ ಶಿವಕುಮಾರ ಸ್ವಾಮೀಜಿಗಳು ನಮ್ಮನ್ನೆಲ್ಲ ಅಗಲಿ ಇಂದಿಗೆ ಎರಡು ವರ್ಷ ಕಳೆದಿವೆ. ಶ್ರೀಗಳ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಮಠದಲ್ಲಿ ಶ್ರಿಗಳಿಗೆ ನಮನ ನಲ್ಲಿಸುವ ಸಲುವಾಗಿ ಸ್ಮರಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಿದರು.

Siddaganga Shivakumara swamiji second death anniversary
ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿರುವ ಸಿದ್ದಗಂಗಾ ಮಠ

ಸಿದ್ದಗಂಗಾ ಮಠದಲ್ಲಿರುವ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿದ್ದು, ಮಠದಲ್ಲಿ ಭಕ್ತಿ ಪೂರ್ವಕ ವಾತಾವರಣ ನಿರ್ಮಾಣವಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್.​ಯಡಿಯೂರಪ್ಪ, ಶ್ರೀ ಸಿದ್ದಲಿಂಗ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾಕ್ಟರ್ ಅಶ್ವತ್ಥನಾರಾಯಣ, ವಚನಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಕ್ಷೇತ್ರದ ಮಠಾಧೀಶರು ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.

ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.