ETV Bharat / state

ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಕೊನೆ ಇರಲ್ಲ: ಶ್ರೀ ಸಿದ್ದಲಿಂಗ ಸ್ವಾಮೀಜಿ - Siddaganga Shre Reactions

ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ನನಗೆ ಆಶ್ಚರ್ಯ ಎನಿಸುತ್ತದೆ. ಎಲ್ಲಾ ಜಾತಿಯಲ್ಲಿ ಎಲ್ಲಾ ಸಮಾಜದವರಿದ್ದಾರೆ. ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರೂ ಸಹ ಇದ್ದಾರೆ. ಅಂತವರಿಗೆ ಹೆಚ್ಚು ಒತ್ತು ಕೊಡುವ ಕೆಲಸ ಸರ್ಕಾರ ಮಾಡಿದರೆ ಇನ್ನೂ ಒಳ್ಳೆಯದು ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

Siddaganga Shre Reactions About Veerashaiva Lingayat Development Corporation Settle
ಶ್ರೀ ಸಿದ್ದಲಿಂಗ ಸ್ವಾಮೀಜಿ
author img

By

Published : Nov 17, 2020, 4:55 PM IST

ತುಮಕೂರು: ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಕೊನೆ ಅನ್ನುವುದೇ ಇರುವುದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಪ್ರಾಧಿಕಾರ ರಚನೆ ಬಗ್ಗೆ ಇಂದು ಸಿದ್ದಗಂಗಾ ಮಠದ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ನನಗೆ ಆಶ್ಚರ್ಯ ಎನಿಸುತ್ತದೆ. ಎಲ್ಲಾ ಜಾತಿಯಲ್ಲಿ ಎಲ್ಲಾ ಸಮಾಜದವರಿದ್ದಾರೆ. ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರೂ ಸಹ ಇದ್ದಾರೆ. ಅಂತವರಿಗೆ ಹೆಚ್ಚು ಒತ್ತು ಕೊಡುವ ಕೆಲಸ ಸರ್ಕಾರ ಮಾಡಿದರೆ ಇನ್ನೂ ಒಳ್ಳೆಯದು ಎಂದಿದ್ದಾರೆ.

ಶ್ರೀ ಸಿದ್ದಲಿಂಗ ಸ್ವಾಮೀಜಿ

ಎಲ್ಲಾ ಸಮಾಜದಲ್ಲೂ ತುಂಬಾ ಬಡವರಿದ್ದಾರೆ. ಬಡತನದ ಶ್ರೇಣಿ ಹೆಚ್ಚಿದೆ. ಆರ್ಥಿಕವಾಗಿ ಕಷ್ಟದಲ್ಲಿದ್ದವರಿಗೆ ಸರ್ಕಾರ ಹೆಚ್ಚು ಒತ್ತು ಕೊಡಬೇಕು. ಇಡೀ‌ ಸರ್ಕಾರ ಇರೋದು ಇಡೀ ರಾಜ್ಯದ ಅಭಿವೃದ್ಧಿಗೋಸ್ಕರ. ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಅವಕಾಶ ಕೊಡುವ ವ್ಯವಸ್ಥೆ ಕಲ್ಪಿಸಿಕೊಟ್ಟರೆ ತುಂಬಾ ಸಂತೋಷ. ಒಂದು ಜಾತಿ ಪ್ರಾಧಿಕಾರ ಮಾಡಿದರೆ ಮುಂದೆ ಪ್ರತಿಯೊಬ್ಬರೂ ಕೇಳುತ್ತಾರೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.