ETV Bharat / state

ಏ. 1ರಂದು ಶಿವಕುಮಾರ ಸ್ವಾಮೀಜಿ 115ನೇ ಜಯಂತಿ ಕಾರ್ಯಕ್ರಮ: ಕೇಂದ್ರ ಸಚಿವ ಅಮಿತ್ ಶಾ ರಿಂದ ಉದ್ಘಾಟನೆ - ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮ ಕೇಂದ್ರ ಸಚಿವ ಅಮಿತ್ ಶಾರಿಂದ ಉದ್ಘಾಟನೆ

ಏಪ್ರಿಲ್ 1ರಂದು ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮವನ್ನ ಕೇಂದ್ರ ಗೃಹ ಸಚಿವ ಅಮಿತ್​ ಶಾ ಉದ್ಘಾಟಿಸಲಿದ್ದಾರೆ ಎಂದು ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

ಬಿ ವೈ ವಿಜಯೇಂದ್ರ
ಬಿ ವೈ ವಿಜಯೇಂದ್ರ
author img

By

Published : Mar 26, 2022, 3:35 PM IST

ತುಮಕೂರು : ಏಪ್ರಿಲ್ 1ರಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆಯಲಿರುವ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವದ ಕಾರ್ಯಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

ಸಿದ್ಧಗಂಗಾ ಮಠದಲ್ಲಿ ಬಿ ವೈ ವಿಜಯೇಂದ್ರ ಮಾಧ್ಯಮಗೋಷ್ಟಿ

ಸಿದ್ಧಗಂಗಾ ಮಠದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದು, ಆ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಲಿದ್ದಾರೆ. ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಈ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ. ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಜಯಂತಿಯನ್ನ, ವ್ಯವಸ್ಥಿತವಾಗಿ ಆಚರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಬಾರಿಯ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.