ತುಮಕೂರು: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳು ಒಂದೆಡೆಯಾದರೆ, ಇನ್ನೊಂದೆಡೆ ಭಾರಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿ, ಚರಂಡಿ ನೀರು ಅಂಗಡಿಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ಸ್ಮಾರ್ಟ್ ಸಿಟಿ ಕಾಮಗಾರಿ ಆರಂಭವಾಗುವ ಮುನ್ನ ಮಳೆ ನೀರು ಸರಾಗವಾಗಿ ಹರಿದು ಹೋಗಲು ಪೂರಕ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದರು. ಆದರೆ ಈ ಕುರಿತು ಅಧಿಕಾರಿಗಳು ಮಾತ್ರ ಯಾವುದೇ ರೀತಿಯ ಕ್ರಮ ಕೈಗೊಳ್ಳದ ಹಿನ್ನೆಲೆ, ಮಳೆನೀರು ಅಂಗಡಿಗಳಿಗೆ ನುಗ್ಗಿ, ವ್ಯಾಪಾರಸ್ಥರು ಬದುಕು ಹೇಳತೀರದಾಗಿದೆ.
ಕೊರೊನಾ ಬಿಕ್ಕಟ್ಟಿನ ನಡುವೆ ದಿಕ್ಕೆಟ್ಟಿರುವ ವ್ಯಾಪಾರಸ್ಥರು, ಮಳೆನೀರು ತಂದೊಡ್ಡಿದ ಸಂಕಷ್ಟದಿಂದಾಗಿ ಕಂಗಾಲಾಗಿದ್ದಾರೆ.