ತುಮಕೂರು: ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಸಿಗಲೆಂದು ಲೂರ್ದು ಮಾತಾ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಶಾಂತಿ ಹಾಗೂ ನೆಮ್ಮದಿಯಿಂದ ಜೀವನ ನಡೆಸುವವರ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಅಮಾಯಕರ ಜೀವವನ್ನು ತೆಗೆಯಲಾಗಿದ್ದು, ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಕ್ರೈಸ್ತ ಬಾಂಧವರು ಪ್ರಾರ್ಥನೆ ಸಲ್ಲಿಸಿದರು.
ಇದಾದ ನಂತರ ನಗರದ ವಿವಿಧ ರಸ್ತೆಗಳಲ್ಲಿ ಕ್ಯಾಂಡಲ್ ಹಿಡಿದು ದೇವರಲ್ಲಿ, ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ದೇಶಕ್ಕೆ ಒಳಿತನ್ನು ಮಾಡಲಿ ಎಂದು ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ಇನ್ನೂರಕ್ಕೂ ಹೆಚ್ಚು ಕ್ರೈಸ್ತ ಬಾಂಧವರು ಪಾಲ್ಗೊಂಡಿದ್ದರು.