ETV Bharat / state

ತುಮಕೂರಿನಲ್ಲಿ ರೋಹಿತ್ ಚಕ್ರತೀರ್ಥಗೆ ವಿಶೇಷ ಪೊಲೀಸ್ ಭದ್ರತೆ

author img

By

Published : May 28, 2022, 1:07 PM IST

Updated : May 28, 2022, 1:33 PM IST

ತುಮಕೂರಿನ ಮಹಾನಗರ ಪಾಲಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲು ಆಗಮಿಸಿದ್ದ ಕನ್ನಡ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರಿಗೆ ಆರು ಪೊಲೀಸ್ ಸಿಬ್ಬಂದಿಯನ್ನೊಳಗೊಂಡ ವಿಶೇಷ ಭದ್ರತೆಯನ್ನು ಒದಗಿಸಲಾಗಿದೆ.

special-security-for-rohit-chakrathirtha
ತುಮಕೂರಿನಲ್ಲಿ ರೋಹಿತ್ ಚಕ್ರತೀರ್ಥ ಗೆ ವಿಶೇಷ ಪೊಲೀಸ್ ಭದ್ರತೆ

ತುಮಕೂರು : ನಗರದಲ್ಲಿ ನಡೆಯುತ್ತಿರುವ ಅಮೃತ ಭಾರತಿಗೆ ಕನ್ನಡದಾರತಿ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಕನ್ನಡ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸುಮಾರು ಆರು ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲು ರೋಹಿತ್ ಚಕ್ರತೀರ್ಥ ಆಗಮಿಸಿದ್ದರು.

ತುಮಕೂರಿನಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಗೆ ವಿಶೇಷ ಪೊಲೀಸ್ ಭದ್ರತೆ

ಈಗಾಗಲೇ ಹಲವು ಆರೋಪಗಳನ್ನು ಎದುರಿಸುತ್ತಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯ ಕೇಳಿಬಂದಿದೆ. ಈ ಹಿಂದೆ ನಾಡಗೀತೆಯನ್ನು ತಿರುಚಿ ವಿವಾದಕ್ಕೊಳಗಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಆಗ್ರಹಿಸಿದ್ದರು. ಜೊತೆಗೆ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿರುವ ಬಗ್ಗೆಯೂ ಆರೋಪ ಮಾಡಲಾಗಿದ್ದು, ಈ ಬಗ್ಗೆ ಬೆಂಗಳೂರು ವಕೀಲರ ಸಂಘ ಇವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದೆ.

ಓದಿ : ಕಾಂಗ್ರೆಸ್ ಇಟಲಿಯನ್ ಮೂಲ, ಆರ್ ಎಸ್ ಎಸ್ ಅಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

Last Updated : May 28, 2022, 1:33 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.