ETV Bharat / state

ಖಾಸಗಿ ಶಾಲೆಗಳ ನೆರವಿಗೆ ಸರ್ಕಾರ ಬರಬೇಕಿದೆ: ಶ್ರೀ ಸಿದ್ದಲಿಂಗ ಸ್ವಾಮೀಜಿ ಒತ್ತಾಯ - ಶ್ರೀ ಸಿದ್ದಲಿಂಗ ಸ್ವಾಮೀಜಿ ಒತ್ತಾಯ

ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಲಾಗಿದೆ. ಈ ನಿಯಮ ಅಳವಡಿಕೆ ಕಷ್ಟಸಾಧ್ಯವಾಗಿದೆ. ಎಲ್ಲೋ ಒಂದು ಕಡೆ ನಡೆದ ಸಣ್ಣಪುಟ್ಟ ಘಟನೆಗಳನ್ನು ಎಲ್ಲ ಕಡೆ ಅನ್ವಯಿಸುವುದು ಸರಿಯಲ್ಲ. ಈ ನಿಯಮವನ್ನು ಸಡಿಲಗೊಳಿಸಬೇಕು ಸಿದ್ದಗಂಗಾ ಮಠ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.

Sri Siddalinga Swamiji insists the government should come to the aid of private schools
ಶ್ರೀ ಸಿದ್ದಲಿಂಗ ಸ್ವಾಮೀಜಿ ಒತ್ತಾಯ
author img

By

Published : Jan 5, 2021, 2:34 PM IST

ತುಮಕೂರು : ಕೊರೊನಾ ಸಂಕಷ್ಟದ ವೇಳೆ ರೈತರಿಗೆ ಕಾರ್ಮಿಕರಿಗೆ ಪರಿಹಾರ ನೀಡಲಾಗಿದೆ, ಖಾಸಗಿ ಶಾಲೆಯ ಸಿಬ್ಬಂದಿಗಳಿಗೂ ಪರಿಹಾರ ಕೊಡಬೇಕು ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸರ್ಕಾರ ಈ ಬಗ್ಗೆ ಗಮನ ಹರಿಸುತ್ತೆ ಅಂತ ಭಾವಿಸುತ್ತೇವೆ. ಖಾಸಗಿ ಸಂಸ್ಥೆಗಳ ಮೇಲೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ ಎಂದರು.

ಶ್ರೀ ಸಿದ್ದಲಿಂಗ ಸ್ವಾಮೀಜಿ ಒತ್ತಾಯ

ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಲಾಗಿದೆ. ಈ ನಿಯಮ ಅಳವಡಿಕೆ ಕಷ್ಟಸಾಧ್ಯವಾಗಿದೆ. ಎಲ್ಲೋ ಒಂದು ಕಡೆ ನಡೆದ ಸಣ್ಣಪುಟ್ಟ ಘಟನೆಗಳನ್ನು ಎಲ್ಲಾ ಕಡೆ ಅನ್ವಯಿಸುವುದು ಸರಿಯಲ್ಲ. ಈ ನಿಯಮವನ್ನು ಸಡಿಲಗೊಳಿಸಬೇಕು ಎಂದರು.

ಖಾಸಗಿ ಸಂಸ್ಥೆಗಳು ಸಾಲ ಮಾಡಿಕೊಂಡಿವೆ. ಬ್ಯಾಂಕ್ ಸಾಲ ಕಟ್ಟಲು ಕಾಲಾವಕಾಶ ನೀಡಬೇಕು. ಖಾಸಗಿ ಸಂಸ್ಥೆಗಳು ಹಲವು ಬೇಡಿಕೆನ್ನಿಟ್ಟುಕೊಂಡು ಹೋರಾಟ ಮಾಡುತ್ತಿವೆ. ನಿಯಮಗಳನ್ನು ಸಡಿಲಗೊಳಿಸಿ ಮಾನ್ಯತೆ ‌ನವೀಕರಣ ಮಾಡಬೇಕು ಎಂದರು.

ಓದಿ : ಇನ್ನೊಂದೆರಡು ದಿನದಲ್ಲಿ ಸಚಿವ ಸ್ಥಾನ:ಕತ್ತಿ, ಶಂಕರ್​ಗೆ ಸಿಹಿ ಸುದ್ದಿ ನೀಡ್ತಾರಾ ಸಿಎಂ?

ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗಲಿದೆ. ಶಿಕ್ಷಣ ಸಚಿವರು ಇದನ್ನು ಗಮನ ಹರಿಸಬೇಕು. ಸೌಹಾರ್ದಯುತವಾಗಿ ಸಮಸ್ಯೆ ಬಗೆ ಹರಿಸಬೇಕು ಎಂದರು. ಶೈಕ್ಷಣಿಕ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳು ರಾಜ್ಯ ಸರಕಾರದ ಜೊತೆಯಲ್ಲಿ ಕೆಲಸ ಮಾಡುತ್ತಿವೆ. ನಾಡಿನ ಶೈಕ್ಷಣಿಕ ಪ್ರಗತಿಗೆ ಖಾಸಗಿ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ. ಕೊರೊನಾ ಬಂದ ಬಳಿಕ ಎಲ್ಲ ಕ್ಷೇತ್ರಗಳು ಸ್ಥಗಿತಗೊಂಡಿವೆ. ಶಿಕ್ಷಣ ಕ್ಷೇತ್ರವು ಸ್ಥಗಿತಗೊಂಡಿದೆ. ಖಾಸಗಿ ಸಂಸ್ಥೆಗಳ ಸಿಬ್ಬಂದಿಗೆ ವೇತನ ಕೊಡುವುದು ಕಷ್ಟವಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.