ತುಮಕೂರು: ಸಿದ್ದಗಂಗಾ ಮಠದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಜರುಗುವ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಯು ಈ ಬಾರಿ ಮಾರ್ಚ್ 1ರಿಂದ 15ರವರೆಗೆ ನಡೆಯಲಿದೆ.
15 ದಿನಗಳ ಕಾಲ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ನಡೆಯಲಿದ್ದು, ರೈತ ಸಮುದಾಯಕ್ಕೆ ಅರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯಲಿವೆ. ಕೈಗಾರಿಕಾ, ಕೃಷಿ, ಆರೋಗ್ಯ, ತೋಟಗಾರಿಕೆ, ಅರಣ್ಯ, ರೇಷ್ಮೆ, ನೀರಾವರಿ, ಶಿಕ್ಷಣ, ಪಶುಪಾಲನೆ, ಮೀನುಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಂಟಾಗಿರುವ ವೈಜ್ಞಾನಿಕ ಬದಲಾವಣೆಗಳನ್ನು ಪ್ರದರ್ಶನದಲ್ಲಿ ಜನರಿಗೆ ಪರಿಚಯಿಸಲಾಗುತ್ತದೆ.
ಓದಿ: ಧರ್ಮೇಗೌಡರ ನಿಧನದಿಂದ ತೆರವಾದ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ: ಟಿಕೆಟ್ಗಾಗಿ ವಿಶ್ವನಾಥ್ ಸರ್ಕಸ್
ಶ್ರೀ ಸಿದ್ದಲಿಂಗೇಶ್ವರ ನಾಟಕ ಮಂಡಳಿ ವತಿಯಿಂದ ಶ್ರೀ ಜಗಜ್ಯೋತಿ ಬಸವೇಶ್ವರ ಎಂಬ ಭಕ್ತಿ ಪ್ರಧಾನ ಐತಿಹಾಸಿಕ ನಾಟಕ ನಡೆಯಲಿದ್ದು, ಕೊರೊನಾ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಪೂರಕ ಮುಂಜಾಗ್ರತಾ ಕ್ರಮಗಳನ್ನು ವಸ್ತು ಪ್ರದರ್ಶನದ ವೇಳೆ ತೆಗೆದುಕೊಳ್ಳಲಾಗಿದೆ ಎಂದು ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಕಾರ್ಯದರ್ಶಿ ಬಿ.ಗಂಗಾಧರಯ್ಯ ತಿಳಿಸಿದ್ದಾರೆ.