ತುಮಕೂರು: ಏಳು ಮಂದಿಗೆ ಸಂಪುಟದಲ್ಲಿ ಸಚಿವ ಸ್ಥಾನದ ಅವಕಾಶ ಕೊಡುತ್ತೇನೆ ಎಂದು ಈಗಾಗಲೇ ಮುಖ್ಯಮಂತ್ರಿ ಹೇಳಿದ್ದಾರೆ. ಅಲ್ಲದೆ ಪಕ್ಷವೂ ಕೂಡ ಈ ಕುರಿತು ತೀರ್ಮಾನಿಸಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ತುಮಕೂರಲ್ಲಿ ಜನಸೇವಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಮಾತನಾಡಿದ ಅವರು, ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದವರಿಗೆ ಅವಕಾಶ ನೀಡಬೇಕಾಗುತ್ತದೆ. ನಮ್ಮ ಪಕ್ಷದಲ್ಲಿರುವ ಸೀನಿಯರ್ ಲೀಡರ್ಗಳು ಕೂಡ ಅವಕಾಶ ಮಾಡಿಕೊಡಬೇಕಾಗುತ್ತದೆ ಎಂದರು.
ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರವಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ನಾಳೆ ಸಂಜೆ 3.30ಗೆ ರಾಜಭವನದಲ್ಲಿ ನೂತನ ಸಚಿವರಿಗೆ ಪ್ರಮಾಣ; ಸಂಪುಟದಿಂದ ಒಬ್ಬರನ್ನು ಕೈಬಿಡಲಾಗುತ್ತದೆ: ಸಿಎಂ