ETV Bharat / state

ತುಮಕೂರಲ್ಲೂ ರಾಜ್ಯ ಮಟ್ಟದ ಹೊನಲು ಬೆಳಕಿನ ಟೆನಿಸ್​​ಬಾಲ್​​​ ಕ್ರಿಕೆಟ್​​ ಟೂರ್ನಿ

ರಾಜ್ಯ ಮಟ್ಟದ ಹೊನಲು ಬೆಳಕಿನ ಟೆನಿಸ್​ ಬಾಲ್​ ಕ್ರಿಕೆಟ್ ಪಂದ್ಯಾವಳಿಯನ್ನು ಮೂರು ದಿನಗಳ ಕಾಲ ತುಮಕೂರು ನಗರದಲ್ಲಿ ಆಯೋಜಿಸಲಾಗಿದೆ. ಚಕ್ರವರ್ತಿ ಗೆಳೆಯರ ಬಳಗದಿಂದ 7ನೇ ವರ್ಷದ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.

State Level Tennis Cricket Tournament
ರಾಜ್ಯ ಮಟ್ಟದ ಹೊನಲು ಬೆಳಕಿನ ಟೆನ್ನಿಸ್​​ ಕ್ರಿಕೆಟ್​​ ಪಂದ್ಯಾವಳಿ
author img

By

Published : Feb 26, 2020, 4:45 PM IST

ತುಮಕೂರು: ಮೂರನೇ ರಾಜ್ಯ ಮಟ್ಟದ ಹೊನಲು ಬೆಳಕಿನ ಟೆನಿಸ್​ ಕ್ರಿಕೆಟ್ ಪಂದ್ಯಾವಳಿಯನ್ನು ಮೂರು ದಿನಗಳ ಕಾಲ ತುಮಕೂರು ನಗರದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡಪರ ಸಂಘಟನೆಯ ಮುಖಂಡ ಪಿ.ಎನ್. ಕೃಷ್ಣಮೂರ್ತಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಚಕ್ರವರ್ತಿ ಗೆಳೆಯರ ಬಳಗದಿಂದ 7ನೇ ವರ್ಷದ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ಪಂದ್ಯಾವಳಿಗೆ ಶ್ರೀ ಸಿದ್ದಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡುವರು ಎಂದು ತಿಳಿಸಿದರು.

ರಾಜ್ಯ ಮಟ್ಟದ ಹೊನಲು ಬೆಳಕಿನ ಟೆನ್ನಿಸ್​​ ಕ್ರಿಕೆಟ್​​ ಪಂದ್ಯಾವಳಿ

ಈಗಾಗಲೇ ಈ ಪಂದ್ಯಾವಳಿಯಲ್ಲಿ ಭಾಗವಹಿಸಲು 20 ತಂಡಗಳು ನೋಂದಣಿ ಮಾಡಿಕೊಂಡಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ಪ್ರತಿ ತಂಡಗಳಿಗೆ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಚಕ್ರವರ್ತಿ ಗೆಳೆಯರ ಬಳಗದಿಂದ ಮಾಡಿಕೊಡಲಾಗುವುದು. ತುಮಕೂರಿನ ಸರ್ವ ನಾಗರಿಕರು ಕ್ರಿಕೆಟ್ ವೀಕ್ಷಿಸುವ ಮೂಲಕ ಕ್ರಿಡಾಪಟುಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.

ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಮಾಜಿ ಸಚಿವ ಎಸ್.ಆರ್. ಶ್ರೀನಿವಾಸ್, ಕೆ.ಎನ್ ರಾಜಣ್ಣ ಶಾಸಕರಾದ ಜ್ಯೋತಿಗಣೇಶ್, ಡಿ.ಸಿ. ಗೌರಿಶಂಕರ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.