ತುಮಕೂರು: ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಸ್ವತಂತ್ರ ಪದವಿಪೂರ್ವ ಕಾಲೇಜು ಕಟ್ಟಡ ಶಿಥಿಲಗೊಂಡಿದ್ದು, ಮಳೆ ಬಂದರೆ ವಿದ್ಯಾರ್ಥಿಗಳು ಭಯದಿಂದಲೇ ಕುಳಿತು ಪಾಠ ಕೇಳುವಂತಾಗಿದೆ.
1972ರಲ್ಲಿ ಶುರುವಾದ ಶಿಕ್ಷಣ ಸಂಸ್ಥೆಯಲ್ಲಿ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜ್ಞಾನಾರ್ಜನೆ ಮಾಡುತ್ತಿದ್ದಾರೆ. ಈ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಮಳೆ ಬಂತಂದ್ರೆ ಕಾಲೇಜಿನ ಕಟ್ಟಡಗಳ ಛಾವಣಿಗಳು ಶಿಥಿಲಗೊಂಡು ಕುಸಿಯತೊಡಗುತ್ತವೆ. ಜೊತೆಗೆ ಅಲ್ಲಲ್ಲಿ ಮೊಲ್ಡ್ ಕಳಚಿ ಬೀಳುತ್ತಿದೆ.
ಕನಿಷ್ಠ ಸೌಕರ್ಯದ ಕೊರತೆಯಿಂದಲೂ ವಂಚಿತವಾಗಿರುವ ಈ ಕಾಲೇಜಿನಲ್ಲಿ ಕುಡಿಯುವ ನೀರು ಬೇಕಾದ್ರೂ ವಿದ್ಯಾರ್ಥಿಗಳು ಅಕ್ಕಪಕ್ಕದ ಅಂಗಡಿಗಳಿಂದ ಖರೀದಿಸಬೇಕು. ಸಂಬಂಧಪಟ್ಟ ಅಧಿಕಾರಿಗಳೇ ಇತ್ತ ಗಮನಹರಿಸಿ. ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.