ETV Bharat / state

ಅವ್ಯವಸ್ಥೆಯ ಆಗರವಾಯ್ತು ತುಮಕೂರು ವಿವಿಯ ಪಿಜಿ ಹಾಸ್ಟೆಲ್​: ವಿದ್ಯಾರ್ಥಿಗಳಿಂದ ಪ್ರೊಟೆಸ್ಟ್​

ತುಮಕೂರು ವಿಶ್ವವಿದ್ಯಾನಿಯದ ಪಕ್ಕದಲ್ಲಿರುವ ಕುವೆಂಪು ನಗರದಲ್ಲಿರುವ ಪಿ.ಜಿ ಹಾಸ್ಟೆಲ್ ಅವ್ಯವಸ್ಥೆಯ ಆಗರವಾಗಿದೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು.

ವಿದ್ಯಾರ್ಥಿಗಳಿಂದ ಪ್ರೊಟೆಸ್ಟ್​
author img

By

Published : Aug 22, 2019, 7:57 PM IST

Updated : Aug 22, 2019, 9:30 PM IST

ತುಮಕೂರು: ವಿಶ್ವವಿದ್ಯಾನಿಲಯದ ಪಕ್ಕದ ಕುವೆಂಪು ನಗರದಲ್ಲಿರುವ ಪಿ.ಜಿ. ಹಾಸ್ಟೆಲ್ ಅವ್ಯವಸ್ಥೆಯ ಆಗರವಾಗಿರುವುದಕ್ಕೆ ರೊಚ್ಚಿಗೆದ್ದ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ, ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ, ಹಾಸ್ಟೆಲ್ ಸೌಲಭ್ಯ ಕಲ್ಪಿಸುತ್ತದೆ. ಆದರೆ ಹಾಸ್ಟೆಲ್​ಗಳು ಸರಿಯಾದ ನಿರ್ವಹಣೆ ಇಲ್ಲದೆ, ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುವುದು ಮಾತ್ರ ತಪ್ಪಿಲ್ಲ. ಇಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಎದುರಾಗಿದ್ದು,ಕೆಲ ಕೊಠಡಿಗಳಲ್ಲಿ ವಿದ್ಯುತ್ ಬಲ್ಪ್​ಗಳೇ ಇಲ್ಲ. ಶೌಚಾಲಯದ ಬಾಗಿಲುಗಳು ಮುರಿದು ಹೋಗಿದ್ದರೂ ರಿಪೇರಿ ಮಾಡುವ ಕೆಲಸವಾಗಿಲ್ಲ. ಅಲ್ಲದೆ ತಮಗಾಗಿ ಬಂದಿರುವ ಹಾಸಿಗೆಗಳನ್ನು ಸಹ ಕೊಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಅರೋಪಿಸಿದರು.

ವಿದ್ಯಾರ್ಥಿಗಳಿಂದ ಪ್ರೊಟೆಸ್ಟ್​

ವಿದ್ಯಾರ್ಥಿಗಳ ಪ್ರತಿಭಟನೆ ವಿಷಯ ತಿಳಿದ ವಿವಿ ಪರೀಕ್ಷಾಂಗ ವಿಭಾಗದ ಕುಲಸಚಿವ ಗಂಗಾ ನಾಯಕ್ ಸ್ಥಳಕ್ಕಾಗಮಿಸಿ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿ,ಒಂದು ತಿಂಗಳಲ್ಲಿ ಅವ್ಯವಸ್ಥೆ ಸರಿಪಡಿಸುವುದಾಗಿ ತಿಳಿಸಿದರು. ಇನ್ನೆರಡು ದಿನಗಳಲ್ಲಿ ಹಾಸ್ಟೆಲ್​ನ ಅವ್ಯವಸ್ಥೆಯನ್ನು ಸರಿಪಡಿಸಬೇಕು ಅಲ್ಲಿವರೆಗೂ ಪ್ರತಿಭಟನೆ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ನಂತರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ವೈ ಎಸ್ ಸಿದ್ದೇಗೌಡ ಭೇಟಿ ನೀಡಿ, ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.

Intro:Body:

vishwa

Conclusion:
Last Updated : Aug 22, 2019, 9:30 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.