ETV Bharat / state

ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್

author img

By

Published : Jan 12, 2020, 7:05 PM IST

ತುಮಕೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ ಜ್ಯೋತಿಗಣೇಶ್ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಿದರು.

ಉಚಿತ ಲ್ಯಾಪ್ ಟಾಪ್
ಉಚಿತ ಲ್ಯಾಪ್ ಟಾಪ್

ತುಮಕೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವದ ಕಾರ್ಯಕ್ರಮವನ್ನು ಶಾಸಕ ಜಿ.ಬಿ ಜ್ಯೋತಿಗಣೇಶ್ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ನೆನಪಿನಾರ್ಥವಾಗಿ ಜನವರಿ ತಿಂಗಳಿನಾದ್ಯಂತ ಯುವಜನತೆಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಕೇವಲ ಆಚರಿಸುವುದಷ್ಟೇ ಅಲ್ಲದೇ ವಿವೇಕಾನಂದರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿವೇಕಾನಂದರು ಭಾರತದ ಹಿರಿಮೆಯನ್ನು ಇಡೀ ವಿಶ್ವಕ್ಕೆ ಪರಿಚಯಿಸಿದವರು, ಅದೇ ರೀತಿ ಪ್ರತಿಯೊಬ್ಬರೂ ಸಹ ಭಾರತದ ಹಿರಿಮೆಯನ್ನು ಹೆಚ್ಚಿಸಬೇಕು ಎಂದರು.

ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ ಜ್ಯೋತಿಗಣೇಶ್ ಭಾಷಣ

ಇಡೀ ವಿಶ್ವದಲ್ಲಿ ಭಾರತ ಯುವಕರ ದೇಶವಾಗಿ ಬೆಳೆದಿದೆ, ಯುವ ಸಮೂಹ ಉತ್ತಮ ದಾರಿಯಲ್ಲಿ ನಡೆಯುವ ಮೂಲಕ ಶಿಕ್ಷಣವನ್ನು ಪಡೆದು, ಸಂಸ್ಕಾರಯುತವಾಗಿ ಬೆಳೆದು, ದೇಶದ ಅಭಿವೃದ್ಧಿಗೆ ಶ್ರಮಿಸಬೇಕಿದೆ. ಇಲ್ಲವಾದರೆ ಈ ಯುವಸಮೂಹ ಭಾರತ ದೇಶಕ್ಕೆ ದೊಡ್ಡ ಗಂಡಾಂತರವನ್ನು ತಂದೊಡ್ಡಲಿದೆ ಎಂದರು. ಇದೇ ವೇಳೆ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು.

Intro:ತುಮಕೂರು:

Body:ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಯನ್ನು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಜಿ.ಬಿ ಜ್ಯೋತಿಗಣೇಶ್, ಸ್ವಾಮಿ ವಿವೇಕಾನಂದರ ನೆನಪಿನಾರ್ಥವಾಗಿ ಜನವರಿ ತಿಂಗಳಿನಾದ್ಯಂತ ಯುವಜನತೆಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ, ಕೇವಲ ಆಚರಿಸುವುದಷ್ಟೇ ಅಲ್ಲದೇ ವಿವೇಕಾನಂದರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ನೀಡುವ ಲ್ಯಾಪ್ ಟಾಪ್ ಕೇವಲ ಮಾಹಿತಿ ಅದರಿಂದ ಜ್ಞಾನಾರ್ಜನೆ ಆಗುವುದಿಲ್ಲ, ಮಾಹಿತಿಯನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು, ಆ ಮಾಹಿತಿಯನ್ನು ಬಳಸಿಕೊಂಡು ವಿದ್ಯಾರ್ಥಿ ಜೀವನವನ್ನು ಹಸನಾಗಿಸಿ ಕೊಳ್ಳಬೇಕು, ದುರುಪಯೋಗ ಪಡಿಸಿಕೊಂಡು ಕಾಲಹರಣ ಮಾಡಿದರೆ ನಿಮಗೆ ತೊಂದರೆ. ಸ್ವಾಮಿ ವಿವೇಕಾನಂದರು ಭಾರತದ ಹಿರಿಮೆಯನ್ನು ಇಡೀ ವಿಶ್ವಕ್ಕೆ ಪರಿಚಯಿಸಿದರು, ಅದೇ ರೀತಿ ಪ್ರತಿಯೊಬ್ಬರೂ ಸಹ ಭಾರತದ ಹಿರಿಮೆಯನ್ನು ಹೆಚ್ಚಿಸಬೇಕು ಎಂದರು.

ಇಡೀ ವಿಶ್ವದಲ್ಲಿ ಭಾರತ ಯುವಕರ ದೇಶವಾಗಿ ಬೆಳೆದಿದೆ, ಯುವ ಸಮೂಹ ಉತ್ತಮ ದಾರಿಯಲ್ಲಿ ನಡೆಯುವ ಮೂಲಕ ಶಿಕ್ಷಣವನ್ನು ಪಡೆದು, ಸಂಸ್ಕಾರಯುತವಾಗಿ ಬೆಳೆದು, ದೇಶದ ಅಭಿವೃದ್ಧಿಗೆ ಶ್ರಮಿಸಬೇಕಿದೆ. ಇಲ್ಲವಾದರೆ ಈ ಯುವಸಮೂಹ ಭಾರತ ದೇಶಕ್ಕೆ ದೊಡ್ಡ ಗಂಡಾಂತರವನ್ನು ತಂದೊಡ್ಡಲಿದೆ ಎಂದು ಅಭಿವೃದ್ಧಿ ಪಟ್ಟರು.
ಬೈಟ್: ಜ್ಯೋತಿಗಣೇಶ್, ಶಾಸಕ.

Conclusion:ಇದೇ ವೇಳೆ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು.
ಇದೇ ವೇಳೆ ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್ ಮುಂತಾದವರು ಹಾಜರಿದ್ದರು.

ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.