ತುಮಕೂರು : ಶಿರಾ ವಿಧಾನಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಬಿ ಜಯಚಂದ್ರ ಇಂದು ನಾಮಪತ್ರ ಸಲ್ಲಿಸಿದರು. ಶಿರಾದ ಮಿನಿವಿಧಾನ ಸೌಧದಲ್ಲಿ ಚುನಾವಣಾಧಿಕಾರಿ ನಂದಿನಿ ದೇವಿ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಕೊರೊನಾ ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಅಭ್ಯರ್ಥಿ ಸೇರಿದಂತೆ ಮೂವರಿಗೆ ಮಾತ್ರ ನಾವು ಪತ್ರ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ನಾಮಪತ್ರ ಸಲ್ಲಿಕೆಗೆ ಮುಂಚೆ ದುರ್ಗಾಂಭ ದೇವಾಲಯದಲ್ಲಿ ಟಿಬಿ ಜಯಚಂದ್ರ ಪೂಜೆ ಸಲ್ಲಿಸಿದರು.
ಅಕ್ಟೋಬರ್ 16ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೆ ಕೊರೊನಾ ಸೋಂಕು ತಗಲಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಅವರು ಯಾವಾಗ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಕಾದು ನೋಡುತ್ತಿದ್ದಾರೆ.
ಇನ್ನೊಂದೆಡೆ ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಬಿಜೆಪಿ ಕಾರ್ಯಕರ್ತರು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ನಿರೀಕ್ಷಿಸುತ್ತಿದ್ದಾರೆ. ನವೆಂಬರ್ 3ರಂದು ಶಿರಾ ಉಪ ಚುನಾವಣೆ ನಡೆಯಲಿದೆ.