ತುಮಕೂರು: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಜಿಂಕೆ ದಾರಿ ಮಧ್ಯೆ ಬಂದಾಗ ಅದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬಿದ್ದು ಶಿಕ್ಷಕ ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಕ್ಯಾದಿ ಗುಂಟೆ ಗ್ರಾಮದಲ್ಲಿ ನಡೆದಿದೆ.
ಬರಗೂರು ರಂಗಾಪುರ ಗ್ರಾಮದ ರಾಜಣ್ಣ (45) ಮೃತ ಶಿಕ್ಷಕ. ನಿನ್ನೆ ರಾತ್ರಿ ಮಗಳೊಂದಿಗೆ ಗ್ರಾಮಕ್ಕೆ ಹೋಗುತ್ತಿದ್ದಾಗ ಏಕಾಏಕಿ ಜಿಂಕೆಯೊಂದು ಅಡ್ಡ ಬಂದಿತ್ತು. ಜಿಂಕೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಈ ಅವಘಡ ನಡೆದು ರಾಜಣ್ಣ ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕ ರಾಜಣ್ಣ ಮೃತಪಟ್ಟಿದ್ದಾರೆ. ರಾಜಣ್ಣ ಅವರ ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.