ತುಮಕೂರು: ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದಿಂದ ಹತ್ತನೇ ವರ್ಷದ ದಶಮಾನೋತ್ಸವ ಕಾರ್ಯಕ್ರಮ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ ಎಂದು ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ಮಲ್ಲಿಕಾರ್ಜುನಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 15ರಂದು ಬಿ.ಹೆಚ್ ರಸ್ತೆಯಲ್ಲಿರುವ ಶ್ರೀ ವೀರಶೈವ ಗುರುಕುಲ ವಿದ್ಯಾರ್ಥಿ ನಿಲಯದಲ್ಲಿ ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದಿಂದ ಹತ್ತನೇ ವರ್ಷದ ದಶಮಾನೋತ್ಸವ ಕಾರ್ಯಕ್ರಮ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶ್ರೀ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು ಎಂದು ತಿಳಿಸಿದರು.