ತುಮಕೂರು: ಆಹಾರ ಅರಸಿ ಗ್ರಾಮಕ್ಕೆ ಬಂದು ಜನರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಈಗ ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿನಲ್ಲಿ ಸಿಕ್ಕಿಹಾಕಿಕೊಂಡಿದೆ.
ಜಿಲ್ಲೆಯ ಬಸವಾಪುರ ಕಾವಲ್‌ನ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು. ಆಹಾರ ಅರಸಿ ಇಂದು ಬೆಳಗ್ಗೆ ಗ್ರಾಮಕ್ಕೆ ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಗ್ರಾಮಕ್ಕೆ ನುಗ್ಗಿ ಜಾನುವಾರು, ಕುರಿ ಹಾಗು ಮೇಕೆಗಳನ್ನು ತಿಂದು ಹಾಕುತ್ತಿದ್ದ ಚಿರತೆ ಜನರಲ್ಲಿ ಆತಂಕ ಸೃಷ್ಟಿಸಿತ್ತು.
ಇದೀಗ ಚಿರತೆ ಸೆರೆಯಾಗಿರುವ ವಿಷಯ ತಿಳಿದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.