ETV Bharat / state

ಅಣ್ಣನೊಂದಿಗೆ ಅನೈತಿಕ ಸಂಬಂಧಕ್ಕೆ ಅಡ್ಡಿ ಆರೋಪ : ತಾಯಿಯನ್ನೇ ಕೊಲೆ ಮಾಡಿದ ಮಗಳು - daughter murdered her mother in tumkur

ಸ್ವಲ್ಪ ದಿನಗಳ ಕಾಲ ಅಣ್ಣ-ತಂಗಿಯಂತೆ ಇದ್ದವರು ಮತ್ತೆ ಅದೇ ಚಾಳಿ ಮುಂದುವರೆಸಿದ್ದರು. ಅಲ್ಲದೇ ಇಬ್ಬರ ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಸಾವಿತ್ರಮ್ಮನನ್ನ ಕತ್ತು ಹಿಸುಕಿ ಕೊಲೆಗೈದಿದ್ದರು. ನಂತರ ಸಾವಿತ್ರಮ್ಮ ಕಾಲು ಜಾರಿ ಸಂಪ್​ಗೆ ಬಿದ್ದು ಸಾವನ್ನಪ್ಪಿರೋದಾಗಿ ಬಿಂಬಿಸಿದ್ದರು..

ಕೊರಟಗೆರೆ ಪೊಲೀಸ್​ ಠಾಣೆ
ಕೊರಟಗೆರೆ ಪೊಲೀಸ್​ ಠಾಣೆ
author img

By

Published : Feb 18, 2022, 2:29 PM IST

ತುಮಕೂರು : ವರಸೆಯಲ್ಲಿ ಅಣ್ಣನ ಜೊತೆ ಅನೈತಿಕ ಸಂಬಂಧ ಹೊಂದಿರುವುದನ್ನ ಪ್ರಶ್ನಿಸಿದ್ದಕ್ಕೆ ಮಗಳೇ ತಾಯಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ.

ಪುನೀತ್ ಹಾಗೂ ಶೈಲಜಾ ಎಂಬುವರು ಬಂಧಿತ ಆರೋಪಿಗಳು. ಜನವರಿ 30ರಂದು ಕೊರಟಗೆರೆ ಪಟ್ಟಣದ ಸಜ್ಜನರಾವ್ ಬೀದಿಯ ಸಾವಿತ್ರಮ್ಮ(45) ನೀರಿನ ಸಂಪಿಗೆ ಬಿದ್ದು ಮೃತಪಟ್ಟಿದ್ದರು. ಈ ಸಂಬಂಧ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಶೈಲಜಾ ಹಾಗೂ ಪುನೀತ್ ಇಬ್ಬರು ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳಾಗಿದ್ದಾರೆ. ವರಸೆಯಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದಾನೆ. ಜನರೆದುರು ಇಬ್ಬರೂ ಅಣ್ಣ-ತಂಗಿಯಂತೆ ವರ್ತನೆ ಮಾಡುತ್ತಿದ್ದರು.

ಆದರೆ, ಕದ್ದುಮುಚ್ಚಿ ಅನೈತಿಕ ಸಂಬಂಧದಲ್ಲಿ ತೊಡಗುತ್ತಿದ್ದರು. ಇದನ್ನು ಗಮನಿಸಿದ್ದ ಸಾವಿತ್ರಮ್ಮ, ಪುನೀತ್ ಹಾಗೂ ಶೈಲಜಾಗೆ ಬುದ್ದಿ ಹೇಳಿ ಮೆಸೇಜ್ ಅಥವಾ ಕಾಲ್ ಮಾಡದಂತೆ ಇಬ್ಬರಿಗೂ ಎಚ್ಚರಿಕೆ ನೀಡಿದ್ದರು.

ಸ್ವಲ್ಪ ದಿನಗಳ ಕಾಲ ಅಣ್ಣ-ತಂಗಿಯಂತೆ ಇದ್ದವರು ಮತ್ತೆ ಅದೇ ಚಾಳಿ ಮುಂದುವರೆಸಿದ್ದರು. ಅಲ್ಲದೇ ಇಬ್ಬರ ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಸಾವಿತ್ರಮ್ಮನನ್ನ ಕತ್ತು ಹಿಸುಕಿ ಕೊಲೆಗೈದಿದ್ದರು. ನಂತರ ಸಾವಿತ್ರಮ್ಮ ಕಾಲು ಜಾರಿ ಸಂಪ್​ಗೆ ಬಿದ್ದು ಸಾವನ್ನಪ್ಪಿರೋದಾಗಿ ಬಿಂಬಿಸಿದ್ದರು.

ಪೊಲೀಸರು ಅನುಮಾನಗೊಂಡು ಇಬ್ಬರನ್ನು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಹಿರಂಗವಾಗಿದೆ. ಈ ಕುರಿತು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.