ETV Bharat / state

ತುಮಕೂರು: ನವಿಲು ಭೇಟೆಯಾಡಿ ಮಾಂಸ ಭಕ್ಷಣೆ; ಒಡಿಶಾ ಮೂಲದ ಮೂವರ ಬಂಧನ

ತುಮಕೂರಿನಲ್ಲಿ ನವಿಲು ಬೇಟೆಯಾಡುತ್ತಿದ್ದ ಒಡಿಶಾ ಮೂಲದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ನವಿಲು ಭೇಟೆ ಆರೋಪಿಗಳ ಬಂಧನ
ನವಿಲು ಭೇಟೆ ಆರೋಪಿಗಳ ಬಂಧನ
author img

By ETV Bharat Karnataka Team

Published : Oct 26, 2023, 9:54 PM IST

ತುಮಕೂರು: ರಾಜ್ಯಾದ್ಯಂತ ಹುಲಿ ಉಗುರಿನ ಪೆಂಡೆಂಟ್ ಪ್ರಕರಣದ ಸದ್ದು ಜೋರಾಗಿರುವ ಬೆನ್ನಲ್ಲೇ ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರನಾಯಕನಪಾಳ್ಯದ ಬಳಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್‌ದಾವು, ದುಬಾ ಕಾಪತ್ ಬಂಧಿತರು. ಇವರು ಅನೇಕ ದಿನಗಳಿಂದ ನವಿಲುಗಳನ್ನು ಕೊಂದು ಭಕ್ಷಿಸುತ್ತಿದ್ದರು.

ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು, 1.5 ಕೆಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು ಹಾಗು ಮಾಂಸ ಬೇಯಿಸಿದ್ದ ಪಾತ್ರೆಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ತುಮಕೂರು ಜಿಲ್ಲೆಯಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ನವಿಲು ಬೇಟೆಯಾಡುವ ಪ್ರಕರಣಗಳು ಕಂಡುಬರುತ್ತಿದ್ದವು. ನವಿಲು ಬೇಟೆ ಶಿಕ್ಷಾರ್ಹ ಅಪರಾಧ ಎಂಬ ಹಿನ್ನೆಲೆಯಲ್ಲಿ ಇಂತಹ ಪ್ರಕರಣಗಳಿಗೆ ಬಹುತೇಕ ಕಡಿವಾಣ ಬಿದ್ದಿತ್ತು. ಇದರಿಂದ ಕಳೆದ ನಾಲ್ಕು ಐದು ವರ್ಷಗಳಿಂದ ನವಿಲುಗಳ ಸಂತತಿ ಕೂಡ ಜಿಲ್ಲೆಯಾದ್ಯಂತ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೂ ಕೂಡ ಕೆಲವೆಡೆ ಕದ್ದುಮುಚ್ಚಿ ನವಿಲುಗಳನ್ನು ಬೇಟೆಯಾಡುವುದು ನಡೆದಿತ್ತು. ಇದೀಗ ಹುಲಿ ಉಗುರು ಪ್ರಕರಣ ಬೆಳಕಿಗೆ ಬಂದಂತೆ ಎಚ್ಚೆತ್ತುಕೊಂಡಿರುವ ಸ್ಥಳೀಯ ಜನತೆ ನವಿಲು ಬೇಟೆಗಾರರನ್ನು ಪತ್ತೆ ಹಚ್ಚಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸುತ್ತಿದ್ದಾರೆ.

ಇದನ್ನೂ ಓದಿ: ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ್ದ ಫೋಟೋ ವೈರಲ್​: ಹುಬ್ಬಳ್ಳಿ ಕಾಂಗ್ರೆಸ್​ ಮುಖಂಡನ ಸ್ಪಷ್ಟನೆ ಹೀಗಿದೆ

ಹುಲಿ ಉಗುರು ಮಾದರಿ ಪೆಂಡೆಂಟ್​, ಇಬ್ಬರು ಬಂಧನ: ಚಿಕ್ಕಮಗಳೂರಿನಲ್ಲಿ ಹುಲಿ ಉಗುರಿನಿಂದ ಡಾಲರ್ ಮಾಡಿ ಕತ್ತಿಗೆ ಹಾಕಿಕೊಂಡಿದ್ದ ಆರೋಪದ ಮೇಲೆ ದೇವಸ್ಥಾನದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ. ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿರುವ ಅರಣ್ಯ ಇಲಾಖೆ, ಮೂರು ಹುಲಿ ಉಗುರನ್ನು ವಶಪಡಿಸಿಕೊಂಡಿದೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.