ETV Bharat / state

ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್... ಕೆ ಎನ್​ ರಾಜಣ್ಣಗೆ ಶಾಕ್​ ಕೊಟ್ಟ ಸರ್ಕಾರ

author img

By

Published : Jul 21, 2019, 9:31 AM IST

ತುಮಕೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯನ್ನು ರಾಜ್ಯ ಸರ್ಕಾರ ಸೂಪರ್ ಸೀಡ್ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಒಂದು ವರ್ಷದ ಅವಧಿಗೆ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿಯನ್ನು ನೇಮಿಸಿದೆ. ಸರ್ಕಾರದ ಈ ಹಠಾತ್ ನಿರ್ಧಾರದಿಂದ ಅಧ್ಯಕ್ಷರಾಗಿದ್ದ ಮಾಜಿ ಶಾಸಕ ಕೆ.ಎನ್ ರಾಜಣ್ಣಗೆ ಭಾರಿ ಹಿನ್ನಡೆಯಾದಂತಾಗಿದೆ.

ಮಾಜಿ ಶಾಸಕ ಕೆ.ಎನ್ ರಾಜಣ್ಣ

ತುಮಕೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯನ್ನು ರಾಜ್ಯ ಸರ್ಕಾರ ಸೂಪರ್ ಸೀಡ್ ಮಾಡಿದೆ.

ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಆಡಳಿತಾಧಿಕಾರಿಯಾಗಿ ಡಿಸಿಸಿ ಬ್ಯಾಂಕಿನ ಅಧಿಕಾರ ವಹಿಸಿಕೊಂಡಿದ್ದಾರೆ. ಜಾಯಿಂಟ್ ರಿಜಿಸ್ಟ್ರಾರ್ ಆಫ್ ಕೋ-ಆಪರೇಟಿವ್ ಸೊಸೈಟಿ ಆದೇಶದ ಮೇರೆಗೆ ಸರ್ಕಾರದಿಂದ ಒಂದು ವರ್ಷ ಅವಧಿಗಾಗಿ ಜಿಲ್ಲಾಧಿಕಾರಿಯನ್ನು ಡಿಸಿಸಿ ಬ್ಯಾಂಕಿನ ಅಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಅಲ್ಲದೆ ನಿನ್ನೆ ಸಂಜೆಯೇ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಸರ್ಕಾರದ ಈ ನಿರ್ಧಾರದಿಂದಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಮಾಜಿ ಶಾಸಕ ಕೆ.ಎನ್ ರಾಜಣ್ಣಗೆ ಭಾರಿ ಹಿನ್ನಡೆಯಾದಂತಾಗಿದೆ. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡ ಅವರ ಸೋಲಿಗೆ ರಾಜಣ್ಣ ಪ್ರಮುಖ ಪಾತ್ರವಹಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಪದೇ ಪದೇ ಕೆ.ಎನ್. ರಾಜಣ್ಣ ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರು.

ಕಾಂಗ್ರೆಸ್ ಪಕ್ಷವು ಮೈತ್ರಿಯಿಂದ ಹೊರಬರಬೇಕು, ಪ್ರತಿಪಕ್ಷದಲ್ಲಿ ಕುಳಿತು ಕೆಲಸ ಮಾಡಬೇಕು, ಎಂದು ಪದೇ ಪದೇ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಒಂದು ರೀತಿ ಜೆಡಿಎಸ್ ಕೆಂಗಣ್ಣಿಗೆ ಗುರಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಈ ನಡುವೆ ಆಡಳಿತ ಮಂಡಳಿಯನ್ನು ಸರ್ಕಾರ ಸೂಪರ್ ಸೀಡ್ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

Intro:ಡಿಸಿಸಿ ಬ್ಯಾಂಕ್ ಸೂಪರ್ ಸೀಡ್....

ಅಧ್ಯಕ್ಷ ಮಾಜಿ ಶಾಸಕ ಕೆ ಎನ್ ರಾಜಣ್ಣಗೆ ಭಾರಿ ಹಿನ್ನೆಡೆ.....

ತುಮಕೂರು
ತುಮಕೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯನ್ನು ಸರ್ಕಾರ ಸೂಪರ್ ಸೀಡ್ ಮಾಡಿದೆ.
ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಆಡಳಿತ ಅಧಿಕಾರಿಯಾಗಿ ಡಿಸಿಸಿ ಬ್ಯಾಂಕಿನ ಅಧಿಕಾರ ವಹಿಸಿಕೊಂಡಿದ್ದಾರೆ. ಜಾಯಿಂಟ್ ರಿಜಿಸ್ಟ್ರಾರ್ ಆಫ್ ಕೋ-ಆಪರೇಟಿವ್ ಸೊಸೈಟಿ ಆದೇಶ ಮೇರೆಗೆ ಸರ್ಕಾರದಿಂದ ಒಂದು ವರ್ಷ ಅವಧಿಗಾಗಿ ಜಿಲ್ಲಾಧಿಕಾರಿಯನ್ನು ಡಿಸಿಸಿ ಬ್ಯಾಂಕಿನ ಅಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಅಲ್ಲದೆ ನಿನ್ನೆ ಸಂಜೆಯೇ ಅವರು ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಇನ್ನೊಂದೆಡೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಮಾಜಿ ಶಾಸಕ ಕೆ ಎನ್ ರಾಜಣ್ಣ ಅವರಿಗೆ ಇದರಿಂದ ಭಾರಿ ಹಿನ್ನಡೆಯಾದಂತಾಗಿದೆ. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್ ಡಿ ದೇವೇಗೌಡ ಅವರ ಸೋಲಿಗೆ ಪ್ರಮುಖ ಪಾತ್ರವಹಿಸಿದ್ದರು ಎಂಬ ಆರೋಪ ದಟ್ಟವಾಗಿತ್ತು. ಅಲ್ಲದೆ ಪದೇಪದೇ ಕೆ ಎನ್ ರಾಜಣ್ಣ ಜೆಡಿಎಸ್ ಮೈತ್ರಿ ಪಕ್ಷ ವಿರುದ್ಧ ಹರಿಹಾಯ್ದಿದ್ದರು. ಕಾಂಗ್ರೆಸ್ ಪಕ್ಷವು ಮೈತ್ರಿಯಿಂದ ಹೊರಬರಬೇಕು ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡಬೇಕು ಎಂದು ಪದೇಪದೇ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಒಂದು ರೀತಿ ಜೆಡಿಎಸ್ ಕೆಂಗಣ್ಣಿಗೆ ಗುರಿಯಾಗಿದ್ದರು ಎಂದು ವಿಶ್ಲೇಷಿಸಲಾಗುತ್ತಿದೆ.Body:TumakuruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.