ತುಮಕೂರು : ಜಿಲ್ಲೆಯಲ್ಲಿ ಇಂದು 402 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ 15361ಕ್ಕೇರಿಕೆಯಾಗಿದೆ.
ಇಂದು ತುಮಕೂರು 104, ಕೊರಟಗೆರೆ 43 , ಮಧುಗಿರಿ 49, ತಿಪಟೂರು 46, ತುರುವೇಕೆರೆ 35, ಶಿರಾ 31, ಪಾವಗಡ ಮತ್ತು ಗುಬ್ಬಿ ತಾಲೂಕಿನಲ್ಲಿ ತಲಾ 23, ಚಿಕ್ಕನಾಯಕನಹಳ್ಳಿಯಲ್ಲಿ 28 ಮಂದಿಗೆ ಸೋಂಕು ತಗುಲಿದೆ.
ಇಂದು 245 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 12,421 ಸಂಪೂರ್ಣ ಗುಣಮುಖರಾಗಿದ್ದಾರೆ. 2,609 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 232ಕ್ಕೆ ಏರಿಕೆಯಾಗಿದೆ.