ETV Bharat / state

ತುಮಕೂರಿನಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿತರು ಗುಣಮುಖ - ಇಬ್ಬರು ಕೊರೊನಾ ಸೋಂಕಿತರು ಗುಣಮುಖ

ತುಮಕೂರು ಜಿಲ್ಲೆಯಲ್ಲಿ ಈವರೆಗೆ 11 ಮಂದಿಯಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ಆ ಪೈಕಿ ಐವರು ಗುಣಮುಖರಾಗಿ, ಇಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರಿಗೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Today two corona infected  people cure  in Tumkur
ಸಂಗ್ರಹ ಚಿತ್ರ
author img

By

Published : May 18, 2020, 9:54 PM IST

ತುಮಕೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಇಬ್ಬರನ್ನು ಇಂದು ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಇದುವರೆಗೂ ಜಿಲ್ಲೆಯಲ್ಲಿ 11 ಮಂದಿಯಲ್ಲಿ ಸೋಂಕು ಕಂಡು ಬಂದಿದ್ದು ಅದರಲ್ಲಿ ಐವರು ಗುಣಮುಖರಾಗಿ, ಇಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರಿಗೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್-19 ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ 1,949 ಮಂದಿಯನ್ನು ಕ್ವಾರಂಟೈನ್​ನಲ್ಲಿ ಇಡಲಾಗಿದೆ. 805 ಮಂದಿಯನ್ನು ಶಂಕಿತರೆಂದು ಗುರುತಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೋಷನ್​ನಲ್ಲಿ ಇರಿಸಲಾಗಿದೆ.

ತುಮಕೂರಿನಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿತರು ಗುಣಮುಖ

ಇದುವರೆಗೂ ಜಿಲ್ಲೆಯಾದ್ಯಂತ 7,379 ಜನರ ಸ್ಯಾಂಪಲ್​​ಗಳನ್ನು ಪಡೆಯಲಾಗಿದೆ. ಆ ಪೈಕಿ 6,483 ಮಂದಿಯ ವರದಿ ನೆಗೆಟಿವ್ ಬಂದಿದ್ದು, 847 ಮಂದಿಯ ಸ್ಯಾಂಪಲ್​​ಗಳ ವರದಿ ಬರಬೇಕಿದೆ. ಇಂದು ಒಂದೇ ದಿನ 245 ಜನರ ಸ್ವಾಬ್ ಟೆಸ್ಟ್ ಮಾಡಲಾಗಿದ್ದು, 38 ಜನರ ಸ್ಯಾಂಪಲ್ ತಿರಸ್ಕರಿಸಿ ಪುನಃ ಪರೀಕ್ಷೆಗೆ ಕಳುಹಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.