ETV Bharat / state

ತುಮಕೂರಿನಲ್ಲಿ ಇಂದು ಇಬ್ಬರಿಗೆ ಕೊರೊನಾ: 8 ಮಂದಿ ಗುಣಮುಖ

ತುಮಕೂರಿನಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ 8 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

today two Corona Positive
ತುಮಕೂರಿನಲ್ಲಿ ಇಂದು ಇಬ್ಬರಿಗೆ ಕೊರೊನಾ: 8 ಮಂದಿ ಗುಣಮುಖ
author img

By

Published : Jun 22, 2020, 8:11 PM IST

ತುಮಕೂರು: ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಾವಿನ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇವರನ್ನು ಟಿಎಂಕೆ 52 ಎಂದು ಗುರುತಿಸಲಾಗಿದೆ. ಜೂ. 19ರಂದು ಚೇಳೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ್ವರ ಮತ್ತು ತಲೆನೋವಿನ ಚಿಕಿತ್ಸೆ ಪಡೆಯಲು ಈ ವ್ಯಕ್ತಿ ತೆರಳಿದ್ದರು. ನಂತರ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಈತನ ಗಂಟಲು ದ್ರವದ ಮಾದರಿಯನ್ನು ಪಡೆಯಲಾಗಿತ್ತು. ಇಂದು ಫಲಿತಾಂಶ ಬಂದಿದ್ದು, ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈತನ ಪ್ರಾಥಮಿಕ ಸಂಪರ್ಕದಲ್ಲಿದ್ದ 18 ಮಂದಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. 28 ಮಂದಿ ದ್ವಿತೀಯ ಸಂಪರ್ಕಿತರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ಶಿರಾ ತಾಲೂಕಿನ ಹೊಸೂರು ಗ್ರಾಮದ 44 ವರ್ಷದ ಮಹಿಳೆಯಲ್ಲಿ ಸೋಂಕು ದೃಢವಾಗಿದ್ದು, ಇವರನ್ನು ಟಿಎಂಕೆ 51 ಎಂದು ಗುರುತಿಸಲಾಗಿದೆ. ಜೂ. 17ರಂದು ಜ್ವರ ಮತ್ತು ನೆಗಡಿ ಹಾಗೂ ಗಂಟಲು ನೋವಿನಿಂದ ಮಹಿಳೆ ಗೋಮಾರನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಮಹಿಳೆಯ ಗಂಟಲು ದ್ರವ ಮಾದರಿಯನ್ನು ಕೋವಿಡ್-19 ಪರೀಕ್ಷಾ ಘಟಕಕ್ಕೆ ಕಳುಹಿಸಲಾಗಿತ್ತು. ಇಂದು ಮಹಿಳೆಯಲ್ಲಿ ಸೋಂಕು ಇರುವುದು ದೃಢವಾಗಿದೆ. ಮಹಿಳೆಯ ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚಲಾಗುತ್ತಿದೆ. ಈಕೆಯ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ 15 ಮಂದಿಯನ್ನು ಎಂಸಿಹೆಚ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. 28 ಮಂದಿ ದ್ವಿತೀಯ ಸಂಪರ್ಕಿತರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ಇನ್ನೊಂದೆಡೆ ಕೋವಿಡ್-19 ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ.5813, ಪಿ.6399, ಪಿ.6400, ಪಿ.6401, ಪಿ.6402, ಪಿ.6403, ಪಿ.6404, ಪಿ.6405 ಸೋಂಕಿತರು ಗುಣಮುಖರಾಗಿದ್ದು, ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 39 ಮಂದಿ ಸೋಂಕಿತರು ಗುಣಮುಖರಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. 11 ಮಂದಿ ಸಕ್ರಿಯ ಸೋಂಕಿತರು ಕೋವಿಡ್-19 ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.