ETV Bharat / state

ನಾಳೆ ಸಿದ್ದಗಂಗಾ ಮಠದ ಉತ್ತರಾಧಿಕಾರಿಗೆ ಪಟ್ಟಾಭಿಷೇಕ.. ನೀತಿ ಸಂಹಿತೆ ಹಿನ್ನೆಲೆ ಸರಳ ಕಾರ್ಯಕ್ರಮ

ಸಿದ್ದಗಂಗಾ ಮಠದ ನೂತನ ಉತ್ತರಾಧಿಕಾರಿ ಮನೋಜ್‌ ಕುಮಾರ್ ಅವರ ಪಟ್ಟಾಭಿಷೇಕ ಕಾರ್ಯಕ್ರಮ ನಾಳೆ ಸರಳವಾಗಿ ನಡೆಯಲಿದೆ.

ಸಿದ್ದಗಂಗಾ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ
ಸಿದ್ದಗಂಗಾ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ
author img

By

Published : Apr 22, 2023, 6:36 PM IST

ತುಮಕೂರು: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಾಳೆ ನಡೆಯಲಿರುವ ನೂತನ ಉತ್ತರಾಧಿಕಾರಿ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲು ಮಠದ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಕಾರ್ಯಕ್ರಮಕ್ಕೆ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಜನಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇಲ್ಲ. ಕೇವಲ ಮಠದ ಭಕ್ತರು ಹಾಗೂ ವಿವಿಧ ಮಠಾಧೀಶರುಗಳು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಿದ್ದಗಂಗಾ ಹಳೆಯ ಮಠದ ಆವರಣದಲ್ಲಿ ಸಮಾರಂಭ: ಮನೋಜ್‌ ಕುಮಾರ್‌ ಅವರನ್ನು ಸಿದ್ದಗಂಗಾ ಮಠದ ನೂತನ ಉತ್ತರಾಧಿಕಾರಿಯನ್ನಾಗಿ ನೇಮಿಸಲಾಗುತ್ತಿದ್ದು, ಶ್ರೀ ಶಿವಕುಮಾರ ಸ್ವಾಮೀಜಿಯವರ ಶಿಷ್ಯರಾಗಿಯೂ ಸಹ ಮನೋಜ್ ಕುಮಾರ್ ಗುರುತಿಸಿಕೊಂಡಿದ್ದರು. 23ರಂದು ಭಾನುವಾರ ಬೆಳಗ್ಗೆ 5 ಗಂಟೆಗೆ ಸಿದ್ದಗಂಗಾ ಮಠದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮದ ವಿಧಿ ವಿಧಾನಗಳಿಗೆ ಚಾಲನೆ ನೀಡಲಾಗುತ್ತದೆ. ಇನ್ನು ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮದ ಸರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿದ್ದಗಂಗಾ ಹಳೆಯ ಮಠದ ಆವರಣದಲ್ಲಿ ಸಮಾರಂಭ ನಡೆಸಲಾಗುತ್ತಿದ್ದು, ಸೀಮಿತ ವ್ಯಕ್ತಿಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ.

ಇನ್ನು ಸರಳವಾಗಿ ಈ ಸಮಾರಂಭ ಆಯೋಜನೆ ಮಾಡಲಾಗುತ್ತಿದ್ದು, ಮಠದ ಭಕ್ತಾದಿಗಳು ಸಹಕಾರ ನೀಡಬೇಕು ಎಂದು ಮಠದ ಆಡಳಿತ ಮಂಡಳಿ ಮನವಿ ಮಾಡಿದೆ. ಪ್ರಸ್ತುತ ಸಿದ್ದಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಶಿಷ್ಯ ಮನೋಜ್‌ ಕುಮಾರ್‌ ಅವರನ್ನು ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಇವರನ್ನು ಅಕ್ಷಯ ತೃತೀಯ ದಿನ ಏ.23ರ ಭಾನುವಾರ ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿ ಆಗಿ ನೇಮಕ ಮಾಡಲಾಗುವುದು ಎಂದು ಈಗಾಗಲೇ ಮಠದ ಕಾರ್ಯದರ್ಶಿ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠ ದೇಶದಲ್ಲಿಯೇ ಪ್ರಸಿದ್ಧಿಯನ್ನು ಪಡೆದುಕೊಂಡಿದ್ದು ಪ್ರಸ್ತುತ ಸುಮಾರು 10 ಸಾವಿರ ವಿದ್ಯಾರ್ಥಿಗಳು ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.

ಉಪನ್ಯಾಸಕರಾಗಿದ್ದ ಮನೋಜ್ ಕುಮಾರ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನ ಹಳ್ಳಿಯ ಷಡಕ್ಷರಯ್ಯ ಮತ್ತು ವಿರೂಪಾಕ್ಷಮ್ಮ ದಂಪತಿಯ ಪುತ್ರರಾದ ಮನೋಜ್ ಕುಮಾರ್ ಅವರು, ಬಿ.ಇಡಿ, ಎಂಎಸ್ಸಿ, ಸಿಎಂಎ, ಹಾಗೂ ವಿದ್ವತ್ ಪೂರ್ಣಗೊಳಿಸಿ ಸಿದ್ದಗಂಗಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಅದೇ ರೀತಿ ಮಾಗಡಿ ತಾಲೂಕಿನ ಕುಂಚಗಲ್ ಬಂಡೆ ಮಠಕ್ಕೂ ಕೂಡ ಹರ್ಷ ಎಂಬುವರನ್ನು ಉತ್ತರ ಅಧಿಕಾರಿಯಾಗಿ ನೇಮಕ ಮಾಡಲಾಗುತ್ತಿದೆ. ದೇವನಹಳ್ಳಿಯಲ್ಲಿರುವ ಬಸವ ಕಲ್ಯಾಣ ಮಠಕ್ಕೂ ಕೂಡ ಗೌರೀಶ್ ಕುಮಾರ್ ಎಂಬುವರನ್ನು ಉತ್ತರಾಧಿಕಾರಿಯನ್ನಾಗಿ ಭಾನುವಾರ ನೇಮಕ ಮಾಡಲಾಗುತ್ತಿದೆ.

15 ನೇ ಶತಮಾನದಲ್ಲಿ ಶ್ರೀ ಗೋಸಲ ಸಿದ್ದೇಶ್ವರ ಸ್ವಾಮೀಜಿ ಶ್ರೀ ಸಿದ್ದಗಂಗಾ ಮಠವನ್ನು ಸ್ಥಾಪಿಸಿದರು. ಪ್ರಖ್ಯಾತ ಶಿವಯೋಗಿಗಳ ಈ ಪರಂಪರೆಯಲ್ಲಿ ಶ್ರೀ ಶ್ರೀ ಅಟವೀಶ್ವರ ಸ್ವಾಮಿಗಳು, ಶ್ರೀ ಉದ್ದಾನ ಶಿವಯೋಗಿಗಳು ಮತ್ತು ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮಿಗಳು ಅವರ ಅನನ್ಯ ಕೊಡುಗೆಗಳೊಂದಿಗೆ ಪ್ರಗತಿ ಸಾಧಿಸಿದೆ.

ಇದನ್ನೂ ಓದಿ:ತುಮಕೂರು ಸಿದ್ದಗಂಗಾ ಮಠಕ್ಕೆ ಸಚಿವ ವಿ.ಸೋಮಣ್ಣ ಭೇಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.