ETV Bharat / state

ತುಮಕೂರು: 63 ಮಂದಿಗೆ ಸೋಂಕು, ಓರ್ವ ಸಾವು

ತುಮಕೂರು ಜಿಲ್ಲೆಯಲ್ಲಿ ಇಂದು 63 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 36 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ. ಇಂದು 44 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆ
author img

By

Published : Jul 29, 2020, 10:27 PM IST

ತುಮಕೂರು: ಜಿಲ್ಲೆಯಲ್ಲಿ ಇಂದು 63 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1536ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿ ಮತ್ತು ಕ್ಯಾತಸಂದ್ರ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗೆ ಸೋಂಕು ತಗುಲಿದೆ. ಓರ್ವ ಗರ್ಭಿಣಿಯಲ್ಲಿಯೂ ಸೋಂಕು ಪತ್ತೆಯಾಗಿದ್ದು, 36 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ.

ತುಮಕೂರು ತಾಲೂಕಿನಲ್ಲಿ 32 ಮಂದಿ, ಚಿಕ್ಕನಾಯಕನಹಳ್ಳಿಯಲ್ಲಿ 8, ಕುಣಿಗಲ್​ನಲ್ಲಿ 7, ಮಧುಗಿರಿಯಲ್ಲಿ ಐವರು, ಶಿರಾ ತಾಲೂಕಿನಲ್ಲಿ ಮತ್ತು ತುರುವೇಕೆರೆಯಲ್ಲಿ ತಲಾ ಇಬ್ಬರು, ತಿಪಟೂರಿನಲ್ಲಿ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾನೆ.

ಇಂದು 44 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 763 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೂ 725 ಜನ ಸಂಪೂರ್ಣ ಗುಣಮುಖರಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.