ETV Bharat / state

ತುಮಕೂರು: ಎಸ್ಎಸ್ಎಲ್​ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 993 ವಿದ್ಯಾರ್ಥಿಗಳು ಗೈರು - Tumkur SSLC Exam Center

ತುಮಕೂರು ಜಿಲ್ಲೆಯಲ್ಲಿ ಇಂದು ನಡೆದ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು 34,212 ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 993 ವಿದ್ಯಾರ್ಥಿಗಳು ಗೈರಾಗಿದ್ದು, ಒಟ್ಟು 33,219 ವಿದ್ಯಾರ್ಥಿಗಳು ಮಾತ್ರ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.

Tumkur: 993 students were absent for SSLC exam
ತುಮಕೂರು: ಎಸ್ಎಸ್ಎಲ್​ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 993 ವಿದ್ಯಾರ್ಥಿಗಳು ಗೈರು
author img

By

Published : Jun 25, 2020, 5:29 PM IST

ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು 34,212 ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 993 ವಿದ್ಯಾರ್ಥಿಗಳು ಗೈರಾಗಿದ್ದು, ಒಟ್ಟು 33,219 ವಿದ್ಯಾರ್ಥಿಗಳು ಮಾತ್ರ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.

ಜಿಲ್ಲೆಯಲ್ಲಿ ಎರಡು ವಿಭಾಗಗಳಿದ್ದು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 13,073 ವಿದ್ಯಾರ್ಥಿಗಳ ಪೈಕಿ 12486 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅಂದರೆ 587 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕಂಟೈನ್ಮೆಂಟ್ ಪ್ರದೇಶದಿಂದ 9 ವಿದ್ಯಾರ್ಥಿಗಳು ಬಂದು ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕುಳ್ಳಿರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಹೊರರಾಜ್ಯಗಳಿಂದ ಬಂದ 8 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಇನ್ನು ತುಮಕೂರು ಜಿಲ್ಲೆಯಲ್ಲಿ 21,139 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೊಂದಾಯಿಸಿಕೊಂಡಿದ್ದರು ಅದರಲ್ಲಿ 20,733 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇನ್ನುಳಿದ 406 ವಿದ್ಯಾರ್ಥಿಗಳು ಗೈರಾಗಿದ್ದರು. ಸದ್ಯ ಇಂದಿನ ಪರೀಕ್ಷೆ ಯಾವುದೇ ರೀತಿಯ ಗೊಂದಲವಿಲ್ಲದೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.