ತುಮಕೂರು: ಜಿಲ್ಲೆಯ ಕುಣಿಗಲ್, ಗುಬ್ಬಿ ಹಾಗೂ ತಾಲೂಕಿನ ವ್ಯಾಪ್ತಿಯಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು ಈಗಾಗಲೇ ಮನುಷ್ಯರ ಮೇಲೆ ದಾಳಿ ಮಾಡುತ್ತಿರುವ ಚಿರತೆಗಳನ್ನು ಗುಂಡುಹಾರಿಸಿ ಕೊಂದು ಹಾಕುವಂತೆ ಸರ್ಕಾರ ಆದೇಶ ಮಾಡಿದೆ.
ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಆದೇಶವನ್ನು ಪಾಲನೆ ಮಾಡಲು ಮುಂದಾಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಕೂಡ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೂ ಅಧಿಕಾರಿಗಳು ಸಮಜಾಯಿಷಿ ನೀಡುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.