ETV Bharat / state

ತುಮಕೂರು 11 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ: ಬಿರುಸುಗೊಂಡ ರಾಜಕೀಯ ಚಟುವಟಿಕೆ

ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಪೈಕಿ ಈಗಾಗಲೇ 10 ಕ್ಷೇತ್ರಗಳಿಗೆ ಅಭ್ಯಥಿಗಳನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.

Tumkur assembly constituency Candidate List
ಬಿಜೆಪಿ ಅಭ್ಯಥಿಗಳು
author img

By

Published : Apr 12, 2023, 2:37 PM IST

ತುಮಕೂರು: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಪೈಕಿ ಈಗಾಗಲೇ 10 ಕ್ಷೇತ್ರಗಳಿಗೆ ಅಭ್ಯಥಿಗಳನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಹಾಗಾಗಿ ಬಹುತೇಕ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಬಯಸಿ ಮಾಜಿ ಸಚಿವ ಸೊಗಡು ಶಿವಣ್ಣ ಮತ್ತು ಹಾಲಿ ಶಾಸಕ ಜ್ಯೋತಿ ಗಣೇಶ್ ನಡುವೆ ಭಾರಿ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಹಾಲಿ ಶಾಸಕ ಜ್ಯೋತಿ ಗಣೇಶ್​​ಗೆ ಟಿಕೆಟ್ ಘೊಷಣೆ ಮಾಡಿದೆ.

ಹಲವು ದಿನಗಳಿಂದ ಮಾಜಿ ಸಚಿವ ಸೊಗಡು ಶಿವಣ್ಣ ಬಹುತೇಕ ಆರ್​​ಎಸ್​​ಎಸ್ ಬೆಂಬಲ ಹಾಗೂ ಹಿರಿತನದ ವಿಶ್ವಾಸದೊಂದಿಗೆ ಟಿಕೆಟ್ ಲಭಿಸಲಿದೆ ಎಂದು ಹೇಳುತ್ತಲೇ ಬಂದಿದ್ದರು. ಅಲ್ಲದೇ ಕ್ಷೇತ್ರದಾದ್ಯಂತ ಜೋಳಿಗೆ ಹಿಡಿದು ಜನರಿಂದ ಚುನಾವಣೆಗಾಗಿ ಹಣವನ್ನು ದಾನವಾಗಿ ಸ್ವೀಕರಿಸಿದ್ದರು. ಆದರೆ, ಅದ್ಯಾವುದೂ ಕೂಡ ಫಲಿಸಿಲಿಲ್ಲ.

Tumkur assembly constituency Candidate List
ಬಿಜೆಪಿ ಅಭ್ಯಥಿಗಳು

ತುಮಕೂರು ನಗರ ವಿಧಾಸಭೆ ಕ್ಷೆತ್ರದಲ್ಲಿ ಈಗಾಗಲೇ ಕಾಂಗ್ರೆಸ್​​ನಿಂದ ಇಕ್ಬಾಲ್ ಅಹಮದ್ ಅವರಿಗೆ ಟಿಕೆಟ್ ಲಭಿಸಿದೆ ಹಾಗೂ ಜೆಡಿಎಸ್​​ನಿಂದ ಕಳೆದ ಬಾರಿ ಪರಾಜಿತ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರಿಗೆ ಟಿಕೆಟ್ ದೊರೆಯುವುದು ಖಚಿತವಾಗಿದೆ. ಇದೀಗ ಬಿಜೆಪಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಹಾಲಿ ಶಾಸಕ ಜ್ಯೋತಿ ಗಣೇಶ್ ಹೆಸರು ಘೋಷಣೆ ಮಾಡಲಾಗಿದ್ದು ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ರೀತಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

ತುರುವೇಕೆರೆ ವಿಧಾನಸಭೆ ಕ್ಷೇತ್ರಕ್ಕೆ ಹಾಲಿ ಶಾಸಕ ಮಸಾಲೆ ಜಯರಾಮ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದ್ದು, ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಜೆಡಿಎಸ್​​ನ ಎಂ.ಟಿ ಕೃಷ್ಣಪ್ಪ ಪ್ರಬಲ ಪೈಪೋಟಿ ನೀಡುತ್ತಿದ್ದು, ಕಾಂಗ್ರೆಸ್​​ನಿಂದ ಮಾಜಿ ವಿಧಾನ ಪರಿಷತ್ ಸದಸ್ಯ ನಾಮಕೇವಾಸ್ತೆ ಕಣದಲ್ಲಿದ್ದಾರೆ.

ಕುಣಿಗಲ್ ವಿಧಾನಸಭೆ ಕ್ಷೇತ್ರಕ್ಕೆ ಬಿಜೆಪಿ ಡಿ. ಕೃಷ್ಣಕುಮಾರ್ ಎಂಬವರಿಗೆ ಟಿಕೆಟ್ ನೀಡಿದ್ದು, ಕಳೆದ ಎರಡು ಬಾರಿಯೂ ಇವರಿಗೆ ಟಿಕೆಟ್ ನೀಡಿತ್ತು. ಆದರೆ, ಇವರು ಪರಾಭವಗೊಂಡಿದ್ದರು. ಈ ಬಾರಿ ಮತ್ತೊಮ್ಮೆ ಇವರಿಗೆ ಮಣೆ ಹಾಕಿದೆ. ಇಲ್ಲಿ ಕಾಂಗ್ರೆಸ್​​ನಿಂದ ಈಗಾಗಲೇ ಹಾಲಿ ಶಾಸಕ ರಂಗನಾಥ್ ಅವರಿಗೆ ಟಿಕೆಟ್ ನೀಡಲಾಗಿದೆ. ಜೆಡಿಎಸ್ ಪಕ್ಷದಲ್ಲಿ ಕೂಡ ಭಾರಿ ಪೈಪೋಟಿ ಇದ್ದು ಇಲ್ಲಿ ಬಹುತೇಕ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಶಾಸಕ ಸುರೇಶಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಜೆಡಿಎಸ್​​​ನಿಂದ ಗೌರಿಶಂಕರ್ ಹಾಗೂ ಬಿಜೆಪಿಯಿಂದ ಮಾಜಿ ಶಾಸಕ ಸುರೇಶ ಗೌಡ ನಡುವೆ ಪ್ರಬಲ ಪೈಪೋಟಿ ಏರ್ಪಡಲಿದೆ ಎನ್ನಲಾಗಿದೆ. ತಿಪಟೂರು ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕ ಹಾಗೂ ಸಚಿವ ಬಿ.ಸಿ ನಾಗೇಶ್ ಅವರಿಗೆ ಟಿಕೆಟ್ ನೀಡಿದೆ. ಈ ಕ್ಷೇತ್ರದಲ್ಲಿಯೂ ಕೂಡ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯಲಿದೆ.

ಐಎಎಸ್​ ಅಧಿಕಾರಿಗೆ ಟಿಕೆಟ್​: ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ನಿವೃತ್ತ ಐಎಎಸ್ ಅಧಿಕಾರಿಯ ಅನಿಲ್ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ನಡುವೆ ಭಾರಿ ಪೈಪೋಟಿ ನಡೆಯುವುದು ಖಚಿತವಾಗಿದೆ. ಕಾಂಗ್ರೆಸ್​​​ನಿಂದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಕಣದಲ್ಲಿದ್ದರೆ, ಜೆಡಿಎಸ್​​ನಿಂದ ಮಾಜಿ ಶಾಸಕ ಸುಧಾಕರ್ ಲಾಲ್ ಕಣದಲ್ಲಿದ್ದಾರೆ.

ಪಾವಗಡ ವಿಧಾನಸಭಾ ಕ್ಷೇತ್ರಕ್ಕೆ ಕೃಷ್ಣನಾಯಕ್ ಎಂಬುಬಬರಿಗೆ ಬಿಜೆಪಿ ಟಿಕೆಟ್ ನೀಡಿದ್ದು ಹೊಸ ಮುಖವನ್ನು ಪರಿಚಯಿಸುತ್ತಿದೆ. ಕಾಂಗ್ರೆಸ್​​ನಿಂದ ವೆಂಕಟೇಶ್ ಹಾಗೂ ಜೆಡಿಎಸ್​​ನಿಂದ ತಿಮ್ಮರಾಯಪ್ಪ ಎಂಬುವವರು ಕಣದಲ್ಲಿದ್ದಾರೆ. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ರಾಜೇಶ್ ಗೌಡ ಎಂಬುವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಕಾಂಗ್ರೆಸ್​​ನಿಂದ ಮಾಜಿ ಸಚಿವ ಟಿ.ಬಿ ಜಯಚಂದ್ರ ಹಾಗೂ ಜೆಡಿಎಸ್​​ನಿಂದ ತಾಲೂಕು ಅಧ್ಯಕ್ಷ ಉಗ್ರೇಶ್ ಕಣದಲ್ಲಿದ್ದಾರೆ.

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಸಚಿವ ಜೆ.ಸಿ ಮಾಧುಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಜೆಡಿಎಸ್​​ನಿಂದ ಸುರೇಶ್ ಬಾಬು ಹಾಗೂ ಕಾಂಗ್ರೆಸ್​​ನಿಂದ ಮಾಜಿ ಶಾಸಕ ಕಿರಣ್ ಕುಮಾರ್ ಕಣದಲ್ಲಿ ಉಳಿದಿದ್ದಾರೆ. ಮಧುಗಿರಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಮಾಜಿ ನಿವೃತ್ತ ಅಧಿಕಾರಿ ಎಲ್.ಸಿ ನಾಗರಾಜ್ ಎಂಬುವರಿಗೆ ಟಿಕೆಟ್ ಘೋಷಣೆ ಮಾಡಿದ್ದು, ಕಾಂಗ್ರೆಸ್​​ನಿಂದ ಕೆ.ಎನ್ ರಾಜಣ್ಣ ಹಾಗೂ ಜೆಡಿಎಸ್​​ನಿಂದ ಹಾಲಿ ಶಾಸಕ ವೀರಭದ್ರಯ್ಯ ಕಣದಲ್ಲಿದ್ದಾರೆ.

ಮಾಜಿ ಸಚಿವ ಸೋಮಣ್ಣ ಅವರ ಮಗ ಅರುಣ್ ಅವರಿಗೆ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಬೇಡಿಕೆಗೆ ಇರಿಸಲಾಗಿದೆ. ಆದರೆ ಪಕ್ಷ ಈವರೆಗೆ ಗುಬ್ಬಿ ವಿಧಾನಸಭಾ ಕ್ಷೇತ್ರವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಹಾಗೂ ಯಾರನ್ನು ಕೂಡ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿಲ್ಲ.

ನನಗೆ ಪ್ರತಿಸ್ಪರ್ಧಿ ಕಾಂಗ್ರೆಸ್ ಹೊರತು ಜೆಡಿಎಸ್ ಅಲ್ಲ: ನಗರ ವಿಧಾನಸಭಾ ಕ್ಷೇತ್ರದಲ್ಲಿ ನಮಗೆ ಪ್ರತಿಸ್ಪರ್ಧಿ ಕಾಂಗ್ರೆಸ್ ಹೊರತು ಜೆಡಿಎಸ್ ಅಲ್ಲ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಜ್ಯೋತಿ ಗಣೇಶ ಹೇಳಿದರು. ತುಮಕೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಟಿಕೆಟ್ ಪಡೆಯಲು ಭಾರಿ ಶ್ರಮವಹಿಸಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಟಿಕೆಟ್ ಕೈತಪ್ಪಿರುವ ಕುರಿತಂತೆ ಅಸಮಾಧಾನದ ವಿಚಾರವನ್ನು ಹೈಕಮಾಂಡ್ ಗಮನಿಸುತ್ತದೆ. ಸಾಮಾನ್ಯವಾಗಿ ಎಲ್ಲ ಪಕ್ಷದಲ್ಲೂ ಟಿಕೆಟ್ ಘೋಷಣೆ ಆದಾಗ ಈ ರೀತಿಯಾದ ಅಸಮಾಧಾನದ ಬೆಳವಣಿಗೆಗಳು ಸಹಜ ಎಂದರು. ಟಿಕೆಟ್​​ ನೀಡಿದ್ದಕ್ಕೆ ರಾಜ್ಯ ಹಾಗೂ ಹೈಕಮಾಂಡ್ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲದೇ ತುಮಕೂರು ನಗರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಕೆಲಸ ಮಾಡಲಾಗುವುದು ಎಂದರು.

ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು: ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಜ್ಯೋತಿ ಗಣೇಶ್ ಹೆಸರು ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ರಾತ್ರೋರಾತ್ರಿ ಅವರ ಮನೆಗೆ ತೆರಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ವೇಳೆ, ಗೃಹ ಸಚಿವ ಅಮಿತ್ ಶಾ ಹಾಗೂ ಮೋದಿ ಪರವಾಗಿ ಘೋಷಣೆ ಕೂಗಿದರು. ಬಳಿಕ ಶಾಸಕ ಜ್ಯೋತಿ ಗಣೇಶ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜ್ಯೋತಿ ಗಣೇಶ್ ಬಿಜೆಪಿ ಪಕ್ಷ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ಕೇವಲ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವುದಕ್ಕಿಂತ ಕ್ಷೇತ್ರ ಪಕ್ಷದ ಹಿಡಿತದಿಂದ ಕೈ ತಪ್ಪಿ ಹೋಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.

ಇದನ್ನೂ ಓದಿ: ಆತುರದ ನಿರ್ಧಾರ ಬೇಡ.. ಪಕ್ಷದಲ್ಲಿ ಉನ್ನತ ಭವಿಷ್ಯವಿದೆ: ಸವದಿಗೆ ಸಿಎಂ ಕಿವಿ ಮಾತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.