ತುಮಕೂರು: ಇಲ್ಲಿನ ಮಹಾನಗರ ಪಾಲಿಕೆ ಜಿಲ್ಲೆಯಲ್ಲಿ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಹಾಗೂ ಜನರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೆಲವೊಂದು ನೀತಿ ನಿಯಮಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
ಮಹಾನಗರ ಪಾಲಿಕೆ ಜಾರಿಗೆ ತರಲಿರುವ ನಿಯಮಗಳು:
- ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ - 500 ರೂ.
- ಮುಖಕ್ಕೆ ಮಾಸ್ಕ್ ಹಾಕಿಕೊಳ್ಳದಿದ್ದರೆ -100 ರೂ.
- ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ರೆ -100 ರೂ. ಹೀಗೆ ವಿವಿಧ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮಹಾನಗರದ ಪಾಲಿಕೆ ಸಿದ್ಧತೆ ನಡೆಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಪಾಲಿಕೆ ಪೌರಾಯುಕ್ತ ಭೂಬಾಲನ್, ಸಾರ್ವಜನಿಕ ಸ್ಥಳದಲ್ಲಿ ಎರಡನೇ ಬಾರಿಗೆ ಎಂಜುಲು ಉಗಿದರೆ -1000 ರೂ., ಎರಡನೇ ಬಾರಿ ಮಾಸ್ಕ್ ಧರಿಸದೇ ಇರುವುದು ಕಂಡುಬಂದರೆ- 200 ರೂ. ದಂಡ, ಎರಡನೇ ಬಾರಿ ಮೂತ್ರ ವಿಸರ್ಜನೆ ಮಾಡಿರುವುದು ಕಂಡು ಬಂದರೆ- 200 ರೂ. ದಂಡ ವಿಧಿಸಲಾಗುವುದು ಎಚ್ಚರಿಕೆ ನೀಡಿದ್ದಾರೆ.