ತುಮಕೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರು ನಗರದಲ್ಲಿ ಈಗಾಗಲೇ ವಿವಿಧ ಕಾಮಗಾರಿಗಳು ಭರದಿಂದ ಸಾಗಿವೆ. ಸ್ಮಾರ್ಟ್ ರಸ್ತೆ ಕಾಮಗಾರಿಗಾಗಿ ಬೆಳಗುಂಬ ರಸ್ತೆಯಲ್ಲಿ ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ತುಮಕೂರು ಮಹಾನಗರ ಪಾಲಿಕೆ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ಈ ವೇಳೆ ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾದೇವಿ ಹಾಗೂ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಸ್ವಾಮಿ ಸ್ಥಳದಲ್ಲಿದ್ದರು. ಬೆಳಗುಂಬ ರಸ್ತೆಯನ್ನು 75 ಅಡಿ ಅಗಲ ಸ್ಮಾರ್ಟ್ ಸಿಟಿ ರಸ್ತೆಯನ್ನಾಗಿ ನಿರ್ಮಿಸಲು ಪೂರಕವಾಗಿದ್ದ ಸ್ಥಳವನ್ನು ಗುರುತಿಸಲಾಯಿತು.
ಸುಮಾರು 6 ತಿಂಗಳ ಮುಂಚೆಯೇ ಸಂಬಂಧಪಟ್ಟ ಮನೆ ಹಾಗೂ ಅಂಗಡಿ ಮಾಲೀಕರಿಗೆ ಒತ್ತುವರಿಯಾಗಿರುವ ಜಾಗದಲ್ಲಿ ನಿರ್ಮಿಸಲಾಗಿರುವ ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಲಾಗಿತ್ತು. ಕೆಲವರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೂ ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.