ETV Bharat / state

ಹೆಚ್ಚುತ್ತಿರುವ ಕೊರೊನಾ ಸೋಂಕು: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಂಡ ಸಜ್ಜು

ತುಮಕೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆ ವೈದ್ಯರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆ
Tumkur District Hospital
author img

By

Published : Apr 12, 2021, 7:25 AM IST

ತುಮಕೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ ಜಿಲ್ಲಾಸ್ಪತ್ರೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

ತುಮಕೂರಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು- ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್ ಬಾಬು ಮಾಹಿತಿ.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್ ಬಾಬು ಮಾತನಾಡಿ, ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ತಕ್ಷಣದ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅದರಲ್ಲೂ ಬಹುತೇಕ ತುರ್ತು ಅಗತ್ಯವಿರುವ ಆಪರೇಷನ್​ಗಳು ಹೊರತುಪಡಿಸಿ ಬಹುತೇಕ ಆಪರೇಷನ್​​ಗಳನ್ನು ಮುಂದೂಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಿರಿಯ ವೈದ್ಯರ ಸಲಹೆ ಮೇರೆಗೆ ತುರ್ತು ಅಗತ್ಯವಲ್ಲದ ಅಪೆಂಡಿಕ್ಸ್, ಕಣ್ಣಿನ ಆಪರೇಷನ್​​ಗಳನ್ನು ಮುಂದೂಡಲಾಗುವುದು. ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಪೂರಕವಾಗಿ ಚಿಕಿತ್ಸೆ ನೀಡಲು ವೈದ್ಯಕೀಯ ತಂಡ ಹಂತ ಹಂತವಾಗಿ ಯೋಜನೆ ರೂಪಿಸಿಕೊಳ್ಳುತ್ತಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.