ETV Bharat / state

ಅನುದಾನ ಸದ್ಬಳಕೆಯಲ್ಲಿ ತುಮಕೂರು ರಾಜ್ಯದಲ್ಲಿಯೇ ಪ್ರಥಮ: ಸಚಿವ ಡಾ. ನಾರಾಯಣ ಗೌಡ ಮೆಚ್ಚುಗೆ

author img

By

Published : Jul 7, 2021, 7:35 AM IST

Updated : Jul 7, 2021, 10:10 AM IST

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಸದ್ಭಬಳಕೆಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ. ಕೋವಿಡ್​ನಿಂದ ಲಾಕ್​ಡೌನ್ ಆಗಿದ್ದರೂ ಕೆಲಸ ವೇಗವಾಗಿ ನಡೆದಿದೆ. ಬಹುತೇಕ ಜಿಲ್ಲೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ ಎಂದು ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಡಾ. ನಾರಾಯಣ ಗೌಡ ತಿಳಿಸಿದರು.

Progress review meeting
ಪ್ರಗತಿ ಪರಿಶೀಲನಾ ಸಭೆ

ತುಮಕೂರು: ಜಿಲ್ಲೆಯ ಬಗ್ಗೆ ಸಚಿವ ನಾರಾಯಣ ಗೌಡ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಸದ್ಭಬಳಕೆಯಲ್ಲಿ ರಾಜ್ಯದಲ್ಲಿಯೇ ತುಮಕೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಅನುದಾನ ಬಳಕೆ ವಿಚಾರದಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ. ಕೋವಿಡ್​ನಿಂದ ಲಾಕ್​ಡೌನ್ ಆಗಿದ್ದರೂ ಕೆಲಸ ವೇಗವಾಗಿ ನಡೆದಿದೆ. ಬಹುತೇಕ ಜಿಲ್ಲೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಆಸಕ್ತಿಯಿಂದ ಕೆಲಸ ಮಾಡಿದ್ದಾರೆ ಎಂದು ಪ್ರಶಂಸಿಸಿದರು.

ಪ್ರಗತಿ ಪರಿಶೀಲನಾ ಸಭೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಹತ್ವ ಏನು ಎನ್ನುವುದನ್ನು ರಾಜ್ಯಕ್ಕೆ ತೋರಿಸಿಕೊಡುತ್ತೇನೆ. ಹಿಂದೆಂದೂ ಆಗಿರದಂತಹ ಅಭಿವೃದ್ಧಿ ಕಾರ್ಯ ಮಾಡುತ್ತೇನೆ. ಪ್ರತಿ ತಾಲೂಕು, ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡುತ್ತೇನೆ. ಅದಕ್ಕಾಗಿಯೇ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ ಎಂದರು.

ತುಮಕೂರಿನಲ್ಲಿ ಸ್ಮಾರ್ಟ್‍ಸಿಟಿ ವತಿಯಿಂದ ಭವ್ಯವಾದ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಬೆಂಗಳೂರಿನಕಂಠೀರವ ಕ್ರೀಡಾಂಗಣ ಹೈಟೆಕ್ ಆಗಲಿದ್ದು, ಅಲ್ಲಿ ಕಾಮಗಾರಿ ಆರಂಭವಾದಾಗ ತುಮಕೂರಿನ ಕ್ರೀಡಾಂಗಣವನ್ನು ರಾಜ್ಯಮಟ್ಟದ ಕ್ರೀಡಾ ಚಟುವಟಿಕೆಗೆ ಬಳಸಬೇಕು. ಕ್ರೀಡಾ ಇಲಾಖೆ ಅಡಿ ಬಾಕಿ ಇರುವ ಕಾಮಗಾರಿಗಳು ಶೀಘ್ರ ಮುಗಿಯಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಹೊಸ ಬೆಳೆ ಬೆಳೆಯುತ್ತಿರುವ ಮೂಸಂಬಿ, ಡ್ರಾಗನ್ ಫ್ರೂಟ್ ಬಗ್ಗೆ ಮಾಹಿತಿ ಪಡೆದ ಸಚಿವರು, ಬೆಳೆ ವಿಮೆಗೆ ಒತ್ತು ಕೊಡುವಂತೆಯೂ ತಿಳಿಸಿದರು. ಅಡಕೆ ಬೆಳೆಯ ಹನಿ ನೀರಾವರಿಗೆ ಸಬ್ಸಿಡಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮನವಿ ಮಾಡಿದಾಗ, ಈ ಬಗ್ಗೆ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.

ತುಮಕೂರು ಜಿಲ್ಲೆ ಒಂದು ಕಾಲದಲ್ಲಿ ಕಬ್ಬಡಿ, ಕೊಕ್ಕೋ ಕ್ರೀಡೆಗೆ ಬಹಳ ಹೆಸರುವಾಸಿಯಾಗಿತ್ತು. ಅದರೆ ಜಿಲ್ಲೆಯಲ್ಲಿ ಕ್ರೀಡಾಚಟುವಟಿಕೆಯೇ ಇಲ್ಲದಂತಾಗಿದೆ. ಹಾಗಾಗಿ ಕ್ರೀಡಾ ಚಟುವಟಿಕೆಗೆ ಒತ್ತು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಇನ್ನೂ ರೈತರು ಮತ್ತು ವರ್ತಕರ ನಡುವೆ ನೇರ ಮಾರುಕಟ್ಟೆ ಒದಗಿಸಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆನ್​ಲೈನ್ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಇದರಿಂದ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಭೆ ಬಳಿಕ ಸ್ಮಾರ್ಟ್ ಸಿಟಿಯಿಂದ ಅಭಿವೃದ್ಧಿಯಾಗುತ್ತಿರುವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

Last Updated : Jul 7, 2021, 10:10 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.