ತುಮಕೂರು : ಸಂಚಾರ ಪೊಲೀಸರು ಮತ್ತು ವಾಹನ ಚಾಲಕರ ವರ್ತನೆ ಮೇಲೆ ನಿಗಾ, ಪಾರದರ್ಶಕತೆ, ನಿಯಮ ಉಲ್ಲಂಘನೆಗೆ ಕಡಿವಾಣ ನಿಟ್ಟಿನಲ್ಲಿ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ಹೊಸ ಪ್ಲಾನ್ನ ಜಾರಿಗೆ ತಂದಿದೆ.
ನಗರದಲ್ಲಿ ವಾಹನಗಳ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದ್ದು, ವಾಹನ ಸವಾರರು ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವುದು ಸಾಮಾನ್ಯವಾಗಿದೆ. ಇತ್ತ ಪೊಲೀಸರು ದಂಡ ವಿಧಿಸಲು ಮುಂದಾದರೆ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯುತ್ತಿದ್ದು, ಸಾರ್ವಜನಿಕರು ಪೊಲೀಸರ ಮೇಲೆ ದೂರುತ್ತಿದ್ದಾರೆ. ಹೀಗಾಗಿ ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ಅಸಾಧ್ಯವಾಗುತ್ತಿದೆ.
ಇವುಗಳಿಗೆ ತೆರೆ ಎಳೆಯಲು ಮುಂದಾಗಿರುವ ಜಿಲ್ಲಾ ಪೊಲೀಸ್ ಇಲಾಖೆ ದಂಡ ವಿಧಿಸುವ ಅಸಿಸ್ಟೆಂಟ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳಿಗೆ ಬಾಡಿ ಕ್ಯಾಮೆರಾ ಅಳವಡಿಸಲು ಮುಂದಾಗಿದೆ, ಇದರಿಂದ ಸ್ಥಳದಲ್ಲಿ ನಡೆಯುವ ಎಲ್ಲಾ ಘಟನೆ ಮತ್ತು ತಪ್ಪಿತಸ್ಥರನ್ನ ಸರಳವಾಗಿ ಕಂಡು ಹಿಡಿಯಬಹುದಾಗಿದೆ. ನಗರದಲ್ಲಿ ಎಂಟು ಸಂಚಾರಿ ಎಎಸ್ಐಗಳಿಗೆ ಬಾಡಿ ಕ್ಯಾಮೆರಾ ನೀಡಿದ್ದಾರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.