ETV Bharat / state

ಕರ್ನಾಟಕ ಬಂದ್​ಗೆ ತುಮಕೂರು ರೈತರ ಬೆಂಬಲ - ಕರ್ನಾಟಕ ಬಂದ್​ಗೆ ತುಮಕೂರು ರೈತರ ಬೆಂಬಲ

ತುಮಕೂರು ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಗ್ರಾಮಮಟ್ಟದ ರೈತರು ನಾಳೆಯ ಬಂದ್​ಗೆ ಬೆಂಬಲ ನೀಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ತಿಳಿಸಿದರು.

ಕರ್ನಾಟಕ ಬಂದ್​ಗೆ ತುಮಕೂರು ರೈತರ ಬೆಂಬಲ
ಕರ್ನಾಟಕ ಬಂದ್​ಗೆ ತುಮಕೂರು ರೈತರ ಬೆಂಬಲ
author img

By

Published : Sep 27, 2020, 4:27 PM IST

ತುಮಕೂರು: ರಾಜ್ಯ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಗ್ರಾಮಮಟ್ಟದ ರೈತರು ನಾಳೆಯ ಬಂದ್​ಗೆ ಬೆಂಬಲ ನೀಡಲಿದ್ದಾರೆ. ನಗರದ ಟೌನ್ ಹಾಲ್​ನಲ್ಲಿ ಬೆಳಗ್ಗೆ 8 ಗಂಟೆಯಿಂದ ಪ್ರತಿಭಟನಾ ರ್ಯಾಲಿ ನಡೆಸಿ, 12 ಗಂಟೆಗೆ ಅದೇ ಸ್ಥಳದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ಅಂಗೀಕಾರ ಮಾಡಬಾರದೆಂದು ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆಗೆ ಅಂಗೀಕಾರ ಪಡೆದಿರುವುದನ್ನು ವಿರೋಧಿಸಿ, ಸೋಮವಾರ ರಾಜ್ಯಾದ್ಯಂತ ಬಂದ್ ನಡೆಸಲಾಗುವುದು. ಈ ಬಂದ್​ಗೆ ವಿವಿಧ ರೈತಪರ ಹಾಗೂ ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಲಿದೆ ಎಂದು ತಿಳಿಸಿದರು.

ರೈತರ ಹೆಸರನ್ನು ಹೇಳಿ ಅಧಿಕಾರ ಪಡೆದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ರೈತರನ್ನು ಬೀದಿಪಾಲು ಮಾಡುವ ಮೂಲಕ ರೈತರಿಗೆ ಮರಣಶಾಸನ ಬರೆಯಲು ಹೊರಟಿದ್ದಾರೆ. ಇದನ್ನು ವಿರೋಧಿಸಿ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಇಡೀ ರಾಜ್ಯಾದ್ಯಂತ ನಾಳೆ ಬಂದ್ ನಡೆಸಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.