ETV Bharat / state

ನಮ್ಮ ಸೇವೆಯನ್ನು ಕಾಯಂಗೊಳಿಸಿ: ಅತಿಥಿ ಉಪನ್ಯಾಸಕರಿಂದ ಸರ್ಕಾರಕ್ಕೆ ಮನವಿ

author img

By

Published : Nov 5, 2019, 10:23 PM IST

ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಕಾಯಂಗೊಳಿಸಬೇಕು. ಇಲ್ಲವಾದರೆ ಜನವರಿ ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗುವುದೆಂದು ತುಮಕೂರು ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸ ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ತಿಳಿಸಿದರು.

ಅತಿಥಿ ಉಪನ್ಯಾಸಕರಿಂದ ಸರ್ಕಾರಕ್ಕೆ ಮನವಿ

ತುಮಕೂರು: ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಕಾಯಂಗೊಳಿಸಬೇಕು. ಇಲ್ಲವಾದರೆ ಜನವರಿಯಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗುವುದೆಂದು ತುಮಕೂರು ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸ ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ತಿಳಿಸಿದರು.

ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕನಿಷ್ಠ ಗೌರವಧನ ವೇತನ ಪಡೆದು ಕಾರ್ಯನಿರ್ವಹಿಸುತ್ತಾ ಬಂದಿದ್ದೇವೆ. ಸುದೀರ್ಘ ಕಾಲಗಳಿಂದ ನಮ್ಮ ಸೇವೆಯನ್ನು ಬಳಸಿಕೊಂಡು, ಈಗ ಸರ್ಕಾರ ಹೊಸ ನೇಮಕಾತಿಗಳನ್ನು ಮಾಡಿಕೊಳ್ಳಲು ಮುಂದಾಗಿದೆ. ಇದರಿಂದ 2,500 ಅತಿಥಿ ಉಪನ್ಯಾಸಕರು ಬೀದಿಪಾಲಾಗುತ್ತಾರೆ ಎಂದರು. ಆದ್ದರಿಂದ ಸೇವೆಯಲ್ಲಿರುವ 13,000 ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಿ ಕಾಯಂ ಮಾಡಬೇಕೆಂದು ಒತ್ತಾಯಿಸಿದರು.

ಕಳೆದ 19 ವರ್ಷಗಳಿಂದ ಸರ್ಕಾರಿ ಕಾಲೇಜಿನಲ್ಲಿ ಶಿಕ್ಷಕನಾಗಿ ಅತ್ಯಂತ ಕಡಿಮೆ ವೇತನಕ್ಕೆ ಕಾರ್ಯನಿರ್ವಹಿಸಿದ್ದೇನೆ. ರಾಜ್ಯ ಸರ್ಕಾರ ಅತಿಥಿ ಎಂಬ ತಾಂತ್ರಿಕ ಪದವನ್ನು ಬಳಸುವ ಮೂಲಕ ನಮ್ಮನ್ನು ಶೋಷಿಸುತ್ತಿದೆ ಎಂದರು. ಪ್ರತಿವರ್ಷವೂ ಸರ್ಕಾರ ಶಿಕ್ಷಕರನ್ನಾಗಿ ಆಯ್ಕೆ ಮಾಡಿಕೊಳ್ಳುತ್ತದೆ ನಂತರದಲ್ಲಿ ತೆಗೆದುಹಾಕುತ್ತದೆ. ಈ ರೀತಿ ಮಾಡುವುದರಿಂದ ನಮ್ಮ ಕುಟುಂಬಗಳು ಬೀದಿ ಪಾಲಾಗುತ್ತವೆ ಎಂದರು. ಹಾಗಾಗಿ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಖಾಯಂಗೊಳಿಸಬೇಕು. ಇಲ್ಲವಾದಲ್ಲಿ ಜನವರಿ ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Intro:ತುಮಕೂರು: ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಖಾಯಂಗೊಳಿಸಬೇಕು ಇಲ್ಲವಾದಲ್ಲಿ ಜನವರಿ ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಎಲ್ಲಾ ಶಿಕ್ಷಕರು ಸೇರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ತುಮಕೂರು ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸ ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ತಿಳಿಸಿದರು.

Body:ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಿಯಮಾನುಸಾರವಾಗಿ ಆಯ್ಕೆಗೊಂಡು ಕನಿಷ್ಠ ಗೌರವಧನ ವೇತನ ಪಡೆದು, ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಾ ಬಂದಿವೆ. ನಮ್ಮಗಳ ಸೇವೆಗೆ ಸಂಬಂಧಿಸಿದಂತೆ ಅತಿಥಿ ಉಪನ್ಯಾಸಕರ ಸೇವಾಭದ್ರತೆ, ವೇತನ ಹೆಚ್ಚಳ ಪರಿಷ್ಕರಣೆಯು ಸರ್ಕಾರದ ಕಾರ್ಯನೀತಿ ವಿಷಯವಾಗಿರುವುದರಿಂದ ಸರ್ಕಾರದ ಹಂತದಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು, ಆದರೆ ಸುದೀರ್ಘ ಕಾಲಗಳಿಂದ ನಮ್ಮ ಸೇವೆಯನ್ನು ಬಳಸಿಕೊಂಡು ಈಗ ಸರ್ಕಾರ ಹೊಸ ನೇಮಕಾತಿಗಳನ್ನು ಮಾಡಿಕೊಳ್ಳಲು ಮುಂದಾಗಿದೆ. ಇದರಿಂದ 2,500 ಅತಿಥಿ ಉಪನ್ಯಾಸಕರು ಬೀದಿಪಾಲಾಗುತ್ತಾರೆ. ಆದ್ದರಿಂದ ಸೇವೆಯಲ್ಲಿರುವ 13,000 ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಿ ಖಾಯಂ ಮಾಡಬೇಕು ಎಂದು ಅತಿಥಿ ಉಪನ್ಯಾಸಕರು ಒತ್ತಾಯಿಸಿದರು.
ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸ ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, ಕಳೆದ 19 ವರ್ಷಗಳಿಂದ ಸರ್ಕಾರಿ ಕಾಲೇಜಿನಲ್ಲಿ ಶಿಕ್ಷಕನಾಗಿ ಅತ್ಯಂತ ಕಡಿಮೆ ವೇತನಕ್ಕೆ ಕಾರ್ಯನಿರ್ವಹಿಸಿದ್ದೇನೆ, ರಾಜ್ಯ ಸರ್ಕಾರ ಅತಿಥಿ ಎಂಬ ತಾಂತ್ರಿಕ ಪದವನ್ನು ಬಳಸುವ ಮೂಲಕ ನಮ್ಮನ್ನು ಶೋಷಿಸುತ್ತಿದೆ, ಪ್ರತಿವರ್ಷವೂ ಶಿಕ್ಷಕರನ್ನಾಗಿ ಆಯ್ಕೆ ಮಾಡಿಕೊಳ್ಳುತ್ತದೆ, ತದನಂತರದಲ್ಲಿ ತೆಗೆದುಹಾಕುತ್ತದೆ. ಈ ರೀತಿ ಮಾಡುವುದರಿಂದ ನಮ್ಮ ಕುಟುಂಬಗಳು ಬೀದಿ ಪಾಲಾಗುತ್ತವೆ, ಹಾಗಾಗಿ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಖಾಯಂಗೊಳಿಸಬೇಕು, ಇಲ್ಲವಾದಲ್ಲಿ ಜನವರಿ ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬೈಟ್: ಮಲ್ಲಿಕಾರ್ಜುನ, ಜಿಲ್ಲಾಧ್ಯಕ್ಷ, ತುಮಕೂರು ಸ.ಪ.ಪೂ ಅತಿಥಿ ಉಪನ್ಯಾಸ ಸಮಿತಿ.

Conclusion:ಇದೇ ವೇಳೆ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಖಾಯಂ ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ವರದಿ
ಸುಧಾಕರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.