ETV Bharat / state

ತುಮಕೂರು ಜೆಡಿಎಸ್​​ನಲ್ಲಿ ಕಲಹ.. ಬೃಹತ್ ಸಮಾವೇಶಕ್ಕೆ ಶಾಸಕರಿಗೇ ಇಲ್ವಾ ಆಹ್ವಾನ?

ತುಮಕೂರು ಜೆಡಿಎಸ್​ನಲ್ಲಿ ಪರ್ಯಾಯ ನಾಯಕತ್ವದ ಕೂಗು ಕೇಳಿಬಂದಿದ್ದು, ಗುಬ್ಬಿ ಕ್ಷೇತ್ರದಲ್ಲಿ ಶಾಸಕರಿಗೆ ಪರ್ಯಾಯವಾಗಿ ಇನ್ನೋರ್ವ ನಾಯಕನಿಗೆ ಮಣೆಹಾಕಲು ಜೆಡಿಎಸ್ ಮುಂದಾಗುತ್ತಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

tumkur-jds-look-for-alternative-leadership-for-a-place-of-gubbi-mla
ಬೃಹತ್ ಸಮಾವೇಶಕ್ಕೆ ಶಾಸಕರಿಗೇ ನೀಡಿಲ್ಲ ಆಹ್ವಾನ
author img

By

Published : Oct 23, 2021, 10:07 AM IST

ತುಮಕೂರು: ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಅವರಿಗೆ ಪರ್ಯಾಯ ನಾಯಕನ ಹುಡುಕಾಟದಲ್ಲಿ ಜೆಡಿಎಸ್​ ನಿರತವಾಗಿದೆ ಎಂಬೆಲ್ಲಾ ಮಾತುಕತೆ ಆರಂಭವಾಗಿದೆ. ಇದಕ್ಕೆ ಪೂರಕವೆಂಬಂತೆ ಅ.25ರಂದು ನಡೆಯಲಿರುವ ಸಮಾವೇಶಕ್ಕೆ ಶಾಸಕರಿಗೆ ಆಹ್ವಾನಿಸದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಜಿಲ್ಲಾ ಪಂಚಾಯತ್​ ಮಾಜಿ ಸದಸ್ಯ ನಾಗರಾಜ್ ಈ ಸಮಾವೇಶದಲ್ಲಿ ಪಕ್ಷ ಸೇರ್ಪಡೆಗೊಳ್ಳುತ್ತಿದ್ದಾರೆ. ಅವರನ್ನೇ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಬಿಂಬಿಸುವ ಪಕ್ಷದ ಮುಖಂಡರ ವ್ಯವಸ್ಥಿತ ತಂತ್ರ ಇದರಲ್ಲಿ ಅಡಗಿದೆ ಎಂದು ಹೇಳಲಾಗುತ್ತಿದೆ.

ಬೃಹತ್ ಸಮಾವೇಶಕ್ಕೆ ಶಾಸಕರಿಗೇ ನೀಡಿಲ್ಲ ಆಹ್ವಾನ

ಇನ್ನೊಂದೆಡೆ ಜೆಡಿಎಸ್ ಜಿಲ್ಲಾಧ್ಯಕ್ಷ ಆಂಜನಪ್ಪ ಹೇಳುವಂತೆ ಈಗಾಗಲೇ ಜೆಡಿಎಸ್ ಶಾಸಕ ಶ್ರೀನಿವಾಸ್ ಅವರಿಗೂ ಕೂಡ ಸಮಾವೇಶದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದಿದ್ದಾರೆ. ಜಿಲ್ಲೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್​ ಮತ್ತು ತಾಲೂಕು ಪಂಚಾಯತ್​ ಚುನಾವಣೆಯಲ್ಲಿ ಪಕ್ಷವನ್ನು ಸದೃಢಗೊಳಿಸಲು ಕಾರ್ಯತಂತ್ರದೊಂದಿಗೆ ಸಮಾವೇಶವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಮಾಜಿ-ಹಾಲಿ ಜೆಡಿಎಸ್ ಶಾಸಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆದರೆ ಇದೇ ವಿಚಾರವಾಗಿ ಮಾತನಾಡಿರುವ ಜೆಡಿಎಸ್ ಶಾಸಕ ಶ್ರೀನಿವಾಸ್ ಹೇಳುವುದೇ ಬೇರೆಯಾಗಿದೆ. ತಾವು ಪ್ರತಿನಿಧಿಸುವ ಕ್ಷೇತ್ರದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶ ಕುರಿತು ಅಧಿಕೃತವಾಗಿ ಯಾವುದೇ ರೀತಿ ಮಾಹಿತಿ ನನಗೆ ಲಭ್ಯವಿಲ್ಲ. ಸ್ಥಳೀಯ ಜೆಡಿಎಸ್ ನಾಯಕರು ಯಾರು ಕೂಡ ಈ ಸಮಾವೇಶವನ್ನು ಆಯೋಜಿಸುವ ಪ್ರಯತ್ನಕ್ಕೆ ಮುಂದಾಗಿಲ್ಲ ಎಂದಿದ್ದಾರೆ.

ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದ ಬಗ್ಗೆ ಜಿಲ್ಲಾಧ್ಯಕ್ಷರಾಗಲಿ, ರಾಜ್ಯಾಧ್ಯಕ್ಷರಾಗಲಿ ಅಥವಾ ರಾಷ್ಟ್ರಾಧ್ಯಕ್ಷರಾಗಲಿ ಮಾಹಿತಿ ನೀಡಿಲ್ಲ ಎಂದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: "ನಾವೆಷ್ಟು ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ಕೊಟ್ಟಿದ್ದೇವೆ ಎಂದು HDK ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು":ಶ್ರೀನಿವಾಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.