ETV Bharat / state

ಕಲ್ಪತರು ನಾಡಿನಲ್ಲಿಂದು 211 ಮಂದಿಗೆ ಕೊರೊನಾ ಪಾಸಿಟಿವ್​ - ತುಮಕೂರು ಹೊಸ ಕೊರೊನಾ ಪ್ರಕರಣಗಳು

ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಇಂದು ಹೊಸದಾಗಿ 211 ಕೊರೊನಾ ಪ್ರಕರಣಗಳು ದಾಖಲಾಗಿವೆ. ಹಾಗೂ 169 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

tumkur kovid report
ಕೊರೊನಾ ಪಾಸಿಟಿವ್​
author img

By

Published : Aug 29, 2020, 10:29 PM IST

ತುಮಕೂರು: ಜಿಲ್ಲೆಯಲ್ಲಿ ಇಂದು 211 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 5,508ಕ್ಕೆ ಏರಿಕೆಯಾಗಿದೆ. ಇನ್ನೂ 1,442 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಗುಬ್ಬಿ ತಾಲೂಕಿನ 42 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, ತುಮಕೂರು ತಾಲೂಕಿನಲ್ಲಿ 32, ಶಿರಾ ತಾಲೂಕಿನಲ್ಲಿ 30 , ಮಧುಗಿರಿ ತಾಲೂಕು 27 , ಕೊರಟಗೆರೆ ತಾಲೂಕಿನಲ್ಲಿ 25, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 18, ತಿಪಟೂರು ತಾಲೂಕಿನಲ್ಲಿ 11, ಕುಣಿಗಲ್ ತಾಲೂಕಿನಲ್ಲಿ 10 , ಪಾವಗಡ ಮತ್ತು ತುರುವೇಕೆರೆ ತಾಲೂಕಿನಲ್ಲಿ ತಲಾ 8 ಮಂದಿಯಲ್ಲಿ ಸೋಂಕು ಕಂಡು ಬಂದಿದೆ.

ಇಂದು 169 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 3,906 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇಂದು ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 160ಕ್ಕೆ ಏರಿಕೆ ಆಗಿದೆ. ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ 19 ಮಂದಿ ಐಸಿಯುನಲ್ಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ 7ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.