ETV Bharat / state

ತುಮಕೂರು: ಬೆಳೆ ಸಮೀಕ್ಷೆ ಆ್ಯಪ್​ಗೆ ಸಚಿವ ಬಿ.ಸಿ. ಪಾಟೀಲ ಚಾಲನೆ - Crop Survey App

ತುಮಕೂರು ತಾಲೂಕಿನ ಕೋರ ಹೋಬಳಿಯ ರೈತರೊಬ್ಬರ ಜಮೀನಿನಲ್ಲಿ ಬೆಳೆದ ಬೆಳೆಗಳ ಫೋಟೋ ಅಪ್ಲೋಡ್ ಮಾಡುವ ಮೂಲಕ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್​​ಗೆ ಸಚಿವ ಬಿ.ಸಿ ಪಾಟೀಲ ಚಾಲನೆ ನೀಡಿದರು.

Minister B.C. Patil
ಬೆಳೆ ಸಮೀಕ್ಷೆ ಆ್ಯಪ್​ಗೆ ಸಚಿವ ಬಿ.ಸಿ. ಪಾಟೀಲ್ ಚಾಲನೆ
author img

By

Published : Aug 14, 2020, 7:36 PM IST

ತುಮಕೂರು: ರೈತರು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಸ್ವಯಂ ದಾಖಲಿಸುವ “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್”ಗೆ ಸಚಿವ ಬಿ.ಸಿ. ಪಾಟೀಲ ಚಾಲನೆ ನೀಡಿದರು.

ತುಮಕೂರು ತಾಲೂಕಿನ ಕೋರ ಹೋಬಳಿಯ ರೈತರೊಬ್ಬರ ಜಮೀನಿನಲ್ಲಿ ಬೆಳೆದ ಬೆಳೆಗಳ ಫೋಟೋ ಅಪ್ಲೋಡ್ ಮಾಡುವ ಮೂಲಕ ಆ್ಯಪ್​​ಗೆ ಚಾಲನೆ ನೀಡಿದರು.

Minister B.C. Patil
ಬೆಳೆ ಸಮೀಕ್ಷೆ ಆ್ಯಪ್​ಗೆ ಸಚಿವ ಬಿ.ಸಿ. ಪಾಟೀಲ ಚಾಲನೆ

ನಂತರ ಮಾತನಾಡಿದ ಅವರು, 3 ವರ್ಷಗಳಿಂದ ಬೆಳೆ ಸಮೀಕ್ಷೆ ಮಾಡಲಾಗುತ್ತಿದೆ. ಈ ಮೊದಲು ಆಯಾ ಗ್ರಾಮದ ಪಿಆರ್​​ಒಗಳು ರೈತರ ಜಮೀನುಗಳಿಗೆ ಬಂದು ಬೆಳೆಯ ಫೋಟೋ ತೆಗೆಯುತ್ತಿದ್ದರು. ಆದರೆ ಪ್ರಸಕ್ತ ವರ್ಷದಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಛಾಯಾಚಿತ್ರ ತೆಗೆದು ರೈತರೇ ಸ್ವಯಂ ಅಪ್ಲೋಡ್ ಮಾಡಬಹುದಾಗಿದೆ ಎಂದರು.

ಬೆಳೆ ಸಮೀಕ್ಷೆಗಾಗಿ ರೈತರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವಂತಿಲ್ಲ. ರೈತ ತನ್ನ ಜಮೀನಿನಲ್ಲಿ ತಾನು ಬೆಳೆದ ಬೆಳೆಯನ್ನು ತಾನೇ ಸಮೀಕ್ಷೆ ಮಾಡಬಹುದು. ಬೆಳೆ ಸಮೀಕ್ಷೆಯಡಿ ಸಂಗ್ರಹವಾಗುವ ಮಾಹಿತಿಯು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಸಹಾಯಧನ ನೀಡಲು ಉಪಯೋಗವಾಗುತ್ತದೆ ಎಂದು ಅವರು ತಿಳಿಸಿದರು.

ರೈತರು ಕೂಡಲೇ ಕಾರ್ಯಪ್ರವೃತ್ತರಾಗಿ ತಮ್ಮ ಜಮೀನಿನ ಬೆಳೆ ವಿವರಗಳನ್ನು ಮೊಬೈಲ್ ಮೂಲಕ ಸ್ವಯಂ ದಾಖಲಿಸಬೇಕು. ಬೆಳೆಗಳ ವಿವರಗಳನ್ನು ದಾಖಲಿಸಲು ಆಗಸ್ಟ್ 24 ಕಡೆಯ ದಿನವಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದರು.

Minister B.C. Patil
ಬೆಳೆ ಸಮೀಕ್ಷೆ ಆ್ಯಪ್​ಗೆ ಸಚಿವ ಬಿ.ಸಿ. ಪಾಟೀಲ್ ಚಾಲನೆ

ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜ ಸುಲೋಚನ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರಘು ಸೇರಿದಂತೆ ರೈತರು ಹಾಜರಿದ್ದರು. ಇದೇ ವೇಳೆ ಪ್ರತಿ ರೈತರಿಗೂ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ಮಾಹಿತಿ ನೀಡಲು ಕೃಷಿ ಇಲಾಖೆ ವತಿಯಿಂದ 10 ದಿನಗಳ ಕಾಲ ಬೆಳೆ ಸಮೀಕ್ಷೆ ಉತ್ಸವ ನಡೆಸಲಾಗುತ್ತಿದ್ದು, ಬೆಳೆ ಸಮೀಕ್ಷೆ ಮಾಹಿತಿ ಸಂಚಾರ ವಾಹನಕ್ಕೆ ಸಚಿವ ಬಿ.ಸಿ. ಪಾಟೀಲ ಹಸಿರು ನಿಶಾನೆ ತೋರಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.