ETV Bharat / state

Tumkur accident: ತುಮಕೂರಿನಲ್ಲಿ ಲಾರಿ-ಆಟೋ ನಡುವೆ ಭೀಕರ ರಸ್ತೆ ಅಪಘಾತ; ತಾಯಿ, ಮಗಳು ಸ್ಥಳದಲ್ಲೇ ಸಾವು - ಈಟಿವಿ ಭಾರತ್​ ಕನ್ನಡ ನ್ಯೂಸ್

ಸಂಬಂಧಿಕರ ಮದುವೆ ಮುಗಿಸಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕ್ಯಾಂಟರ್​ ಲಾರಿ ಹಾಗೂ ಆಟೋ ಮುಖಾಮುಖಿ
ಕ್ಯಾಂಟರ್​ ಲಾರಿ ಹಾಗೂ ಆಟೋ ಮುಖಾಮುಖಿ
author img

By

Published : Jun 16, 2023, 3:53 PM IST

Updated : Jun 16, 2023, 7:19 PM IST

ತುಮಕೂರು‌ : ಕ್ಯಾಂಟರ್​ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ಘಟನೆ ನಡೆಯಿತು. ನಗರದ ಕುಂಟಮ್ಮದ ತೋಟದ ನಿವಾಸಿಗಳಾದ ಶಾಂತಲಕ್ಷ್ಮಿ (30) ಹಾಗೂ ಚಿನ್ಮಯಿ (5) ಮೃತರು.

ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಭೀಮಸಂದ್ರದಲ್ಲಿ ಸಂಬಂಧಿಕರ ಮದುವೆ ಮುಗಿಸಿ ಆಟೋದಲ್ಲಿ ನಾಲ್ವರು ತುಮಕೂರು ನಗರಕ್ಕೆ ಬರುತ್ತಿದ್ದರು. ತುಮಕೂರು ಕಡೆಯಿಂದ ಹೋಗುತ್ತಿದ್ದ ಕ್ಯಾಂಟರ್ ಲಾರಿಯ ಬ್ರೇಕ್ ಕಟ್ ಆಗಿ ಆಟೋಗೆ ಡಿಕ್ಕಿ ಹೊಡೆದಿದೆ. ಶಾಂತಲಕ್ಷ್ಮೀ ಅವರ ಪುತ್ರ ತನ್ಮಯ್ ಹಾಗೂ ಆಟೋ ಚಾಲಕ ಗಿರೀಶ್​ಗೆ ಗಂಭೀರ ಗಾಯಗೊಂಡಿದ್ದಾರೆ. ತಾಯಿ ಮತ್ತು ಮಗಳು ಸ್ಥಳದಲ್ಲೇ ಅಸುನೀಗಿದ್ದಾರೆ. ತನ್ಮಯ್​ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಿರೀಶ್​ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Mysore Bangalore Highway accident: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಓರ್ವ ಸಾವು ; 3 ಮಂದಿಗೆ ತೀವ್ರ ಗಾಯ

ಕಾರು ಪಲ್ಟಿ, ಆರ್​ಬಿಐ ನೌಕರ ಸಾವು : ಬೆಂಗಳೂರು– ಮೈಸೂರು ದಶಪಥ ಎಕ್ಸ್‌ಪ್ರೆಸ್ ಹೆದ್ದಾರಿಯ ರಾಮನಗರ ಬಳಿಯ ಡಿಬಿಎಲ್ ಕಚೇರಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಆರ್‌ಬಿಐ ನೌಕರ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಜಗದೀಶ್ (48) ಮೃತರು. ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಜಗದೀಶ್, ಅಲ್ಲಿನ ಆರ್‌ಬಿಐ ವಸತಿ ಸಮುಚ್ಚಯದಲ್ಲಿ ವಾಸವಾಗಿದ್ದರು. ಮೈಸೂರಿನಲ್ಲಿ ಕುಟುಂಬದ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ಪತ್ನಿ ನಂದಿತಾ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರೆಟಾ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು.

ಇದನ್ನೂ ಓದಿ : ಪ್ರತ್ಯೇಕ ಘಟನೆ: KSRTC ಬಸ್​ಗೆ ಬಾಲಕ ಬಲಿ.. ಕಾರು ಗುದ್ದಿ ಅಪರಿಚಿತ ವ್ಯಕ್ತಿ ಸಾವು

ಈ ಸಂದರ್ಭದಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ನಗರದ ಡಿ.ಬಿ.ಎಲ್ ಕಚೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಹಾಕಿರುವ ಕಬ್ಬಿಣದ ಬೇಲಿಗೆ ಡಿಕ್ಕಿ ಹೊಡೆದು ಪಕ್ಕದ ಸರ್ವೀಸ್ ರಸ್ತೆಗೆ ಬಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ಜಗದೀಶ್ ಅವರ ತಲೆಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತಪಟ್ಟರು. ಕಾರಿನಲ್ಲಿದ್ದ ಪತ್ನಿ ನಂದಿತಾ ಹಾಗು ಹಿಂಬದಿ ಕುಳಿತಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದ್ದು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹರಿದು ಹೆಡ್ ಕಾನ್ಸ್​ಟೇಬಲ್ ಸಾವು - ಕೊಲೆ ಶಂಕೆ

Last Updated : Jun 16, 2023, 7:19 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.