ತುಮಕೂರು: ದೇಶದ ವಿವಿಧೆಡೆ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಯೋಜನೆಗಳ ಪೈಕಿ ತುಮಕೂರು ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯು 7ನೇ ಸ್ಥಾನದಲ್ಲಿದೆ ಎಂದು ಶಾಸಕ ಜ್ಯೋತಿ ಗಣೇಶ್ ತಿಳಿಸಿದ್ದಾರೆ.
ಪ್ರತಿ ವರ್ಷ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 100 ಕೋಟಿ ರೂ. ಹಣ ಸ್ಮಾರ್ಟ್ ಸಿಟಿ ಕಾಮಗಾರಿಗೆ ಬರಬೇಕಿದೆ. ಒಟ್ಟು 926 ಕೋಟಿ ರೂ. ಗಳ ಸ್ಮಾರ್ಟ್ ಸಿಟಿ ಕಾಮಗಾರಿ ಇದಾಗಿದೆ. ಹಂತ ಹಂತವಾಗಿ ಅನುದಾನ ಬಿಡುಗಡೆಯಾಗುತ್ತದೆ ಎಂದು ಅವರು ಹೇಳಿದರು.
ತುಮಕೂರು ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಕೆಲವೊಂದು ಅವೈಜ್ಞಾನಿಕ ಕಾಮಗಾರಿಗಳು ಕೂಡ ನಡೆಯುತ್ತಿವೆ. ಕೆಲವು ಕಡೆ 18 ಅಡಿ ರಸ್ತೆಗಳಲ್ಲಿ ಸ್ಮಾರ್ಟ್ ಚರಂಡಿ ಹಾಗೂ ಪೈಪ್ಲೈನ್ಗಳನ್ನು ಅಳವಡಿಸಬೇಕಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯನ್ನು ಕೂಡ ಯೋಜನೆ ಎದುರಿಸಬೇಕಾಗಿದೆ.
2022ರ ಡಿಸೆಂಬರ್ ಬೆಳಗ್ಗೆ ಐದು ವರ್ಷಗಳ ಅವಧಿಯ ಕಾಮಗಾರಿ ಪೂರ್ಣಗೊಳ್ಳುತ್ತದೆ ಎಂಬ ನಿರೀಕ್ಷೆ ಇದೆ. ಅಲ್ಲದೇ 2021ರ ಡಿಸೆಂಬರ್ ವೇಳೆಗೆ ಶೇ 90ರಷ್ಟು ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಉಪ ಸಮರ ಪ್ರಚಾರ : ಅಭ್ಯರ್ಥಿಗಳ ಪರ ಮತ ಬೇಟೆಗೆ ಸಿದ್ಧರಾದ ಸಿಎಂ
ತುಮಕೂರು ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಬಸ್ ಸ್ಟ್ಯಾಂಡ್ ಕಾಮಗಾರಿ ವಿಳಂಬವಾಗಬಹುದು ಎಂದು ಅವರು ಹೇಳಿದರು.