ETV Bharat / state

ತುಮಕೂರು ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಗರಂ ಆದ ಪಾಲಿಕೆ ಸದಸ್ಯರು - ತುಮಕೂರು ಸ್ಮಾರ್ಟ್​ ಸಿಟಿ ಕಾಮಗಾರಿಗಳ ಕುರಿತ ಸಭೆ ಸುದ್ದಿ

ಮಹಾನಗರ ಪಾಲಿಕೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಬಗ್ಗೆ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಮಗಾರಿಗಳಿಂದ ಆಗುತ್ತಿರುವ ತೊಂದರೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಪಾಲಿಕೆ ಸದಸ್ಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಮಾಹಿತಿ ನೀಡಿ ಕಾಮಗಾರಿಗಳನ್ನು ಪ್ರಾರಂಭಿಸಿ ಉಂಟಾಗುವ ತೊಂದರೆಗಳನ್ನು ತಡೆಗಟ್ಟಲು ಸಹಕಾರಿಯಾಗುವಂತೆ ಅಧಿಕಾರಿಗಳಲ್ಲಿ ಪಾಲಿಕೆ ಸದಸ್ಯರು ಮನವಿ ಮಾಡಿದರು.

tumkuru-municipality-meeting
ಸ್ಮಾರ್ಟ್ ಸಿಟಿ ಕಾಮಗಾರಿಗಳ ಬಗ್ಗೆ ಸಭೆ
author img

By

Published : Nov 30, 2019, 10:41 PM IST

ತುಮಕೂರು: ಸ್ಮಾರ್ಟ್ ಸಿಟಿ ಅಧಿಕಾರಿಗಳು ಏಕ ಚಕ್ರಾಧಿಪತ್ಯ ರೀತಿಯಲ್ಲಿ ಕಾಮಗಾರಿಗಳನ್ನು ನಡೆಸುತ್ತಿದ್ದು, ಹಿಂದಿನ ಜಿಲ್ಲಾಧಿಕಾರಿ ಮೋಹನ್ ಕುಮಾರ್ ನೀಡಿದಂತಹ ನಿರ್ದೇಶನಗಳನ್ನು ಗಾಳಿಗೆ ತೂರಿ ಮನಬಂದಂತೆ ಕಾಮಗಾರಿಗಳನ್ನು ನಡೆಸುತ್ತಿದ್ದಾರೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಕುಮಾರ್ ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ಮಹಾನಗರ ಪಾಲಿಕೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಬಗ್ಗೆ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ನಯಾಜ್ ಅಹಮದ್ ಮಾತನಾಡಿ, ವಾರ್ಡ್​​ಗಳ ಸದಸ್ಯರ ಗಮನಕ್ಕೆ ತಾರದೆ ಅಧಿಕಾರಿಗಳು ಕಾಮಗಾರಿ ನಡೆಸುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಯಾವ ರಸ್ತೆಗಳನ್ನು ನೋಡಿದರು ಧೂಳು ತುಂಬಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಕಾಮಗಾರಿಗಳನ್ನು ನಡೆಸುವ ಮುನ್ನ ವಾರ್ಡ್ ಸದಸ್ಯರ ಗಮನಕ್ಕೆ ತಂದು ಕಾಮಗಾರಿ ನಡೆಸುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು.

ಸ್ಮಾರ್ಟ್ ಸಿಟಿ ಕಾಮಗಾರಿಗಳ ಬಗ್ಗೆ ಸಭೆ

ಮಹಾನಗರ ಪಾಲಿಕೆ ಸದಸ್ಯ ಕುಮಾರ್ ಮಾತನಾಡಿ, ಈ ಹಿಂದಿನ ಜಿಲ್ಲಾಧಿಕಾರಿ ಮೋಹನ್ ಕುಮಾರ್ ಅವರ ಆದೇಶದಂತೆ ಕಾಮಗಾರಿ ನಡೆಸುವ ವಾರ್ಡ್ ನ ಸದಸ್ಯರ ಬಳಿ ಕಾಮಗಾರಿ ಕುರಿತು ಮಾಹಿತಿಗಳನ್ನು ನೀಡಿದ ನಂತರ ಕಾಮಗಾರಿ ಪ್ರಾರಂಭಿಸಬೇಕು. ಆದರೆ ಪಾಲಿಕೆ ಸದಸ್ಯರ ಗಮನಕ್ಕೆ ತರದೆ ತಮಗೆ ಇಷ್ಟ ಬಂದ ರೀತಿಯಲ್ಲಿ ಕಾಮಗಾರಿಗಳನ್ನು ನಡೆಸುತ್ತಿದ್ದಿರಾ ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕ ಅಜಯ್ ಮಾತನಾಡಿ, ನಗರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳಿಂದ ಬಹಳಷ್ಟು ಸಮಸ್ಯೆಗಳಾಗಿವೆ ಅದನ್ನು ಒಪ್ಪಿಕೊಳ್ಳುತ್ತೇನೆ, ಹಿರಿಯ ಅಧಿಕಾರಿಗಳಿಂದ ನಮಗೆ ಆದೇಶ ಬಂದಿದ್ದು ನಮ್ಮಲ್ಲಿರುವ ಹಣವನ್ನು ಟೆಂಡರ್ ಮೂಲಕ ಕೆಲಸ ಮಾಡಿಸಬೇಕು, ಇಲ್ಲವಾದಲ್ಲಿ ಹಣ ಬಿಡುಗಡೆಯಾಗುವುದಿಲ್ಲ ಎಂದು ಸೂಚನೆ ನೀಡಲಾಗಿದೆ, ಹಾಗಾಗಿ ಸಮಸ್ಯೆ ಉಂಟಾಗಿದ್ದು ಎಲ್ಲಾ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಸಂಸದ ಜಿ.ಎಸ್ ಬಸವರಾಜು, ಮಹಾನಗರ ಪಾಲಿಕೆಯ ಮೇಯರ್ ಲಲಿತಾ ರವೀಶ್, ಮಹಾನಗರಪಾಲಿಕೆ ಆಯುಕ್ತ ಶಿವಕುಮಾರ್, ಪಾಲಿಕೆಯ ಸದಸ್ಯರು ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಪಾಲ್ಗೊಂಡಿದ್ದರು.

Intro:ತುಮಕೂರು: ಸ್ಮಾರ್ಟ್ ಸಿಟಿ ಅಧಿಕಾರಿಗಳು ಏಕ ಚಕ್ರಾಧಿಪತಿ ರೀತಿಯಲ್ಲಿ ಕಾಮಗಾರಿಗಳನ್ನು ನಡೆಸುತ್ತಿದ್ದು, ಹಿಂದಿನ ಜಿಲ್ಲಾಧಿಕಾರಿ ಮೋಹನ್ ಕುಮಾರ್ ನೀಡಿದಂತಹ ನಿರ್ದೇಶನಗಳನ್ನು ಗಾಳಿಗೆ ತೂರಿ ಮನಬಂದಂತೆ ಕಾಮಗಾರಿಗಳನ್ನು ನಡೆಸುತ್ತಿದ್ದಾರೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಕುಮಾರ್ ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Body:ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಪಾಲಿಕೆ ಸದಸ್ಯರ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳ ಜೊತೆ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಸಭೆ ನಡೆಸಲಾಯಿತು.
ಸ್ಥಾಯಿ ಸಮಿತಿ ಅಧ್ಯಕ್ಷ ನಯಾಜ್ ಅಹಮದ್ ಮಾತನಾಡಿ, ನಮ್ಮ ವಾರ್ಡ್ಗಳ ಗಳಲ್ಲಿ ಸದಸ್ಯರ ಗಮನಕ್ಕೆ ತಾರದೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ಕಾಮಗಾರಿ ನಡೆಸುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಯಾವ ರಸ್ತೆಗಳನ್ನು ನೋಡಿದರು ಧೂಳು ತುಂಬಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಕಾಮಗಾರಿಗಳನ್ನು ನಡೆಸುವ ಮುನ್ನ ಆ ವಾರ್ಡ್ನ ಸದಸ್ಯರ ಗಮನಕ್ಕೆ ತಂದು ಕಾಮಗಾರಿ ನಡೆಸಿದರೆ ವಾರ್ಡ್ನ ಸದಸ್ಯರು ಸಾರ್ವಜನಿಕರಿಗೆ ಉತ್ತರ ಹೇಳಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಇಂದು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಬೈಟ್: ನಯಾಸ್ ಅಹಮದ್, ಆರೋಗ್ಯ ಮತ್ತು ಸ್ಥಾಯಿ ಸಮಿತಿ, ಮಹಾನಗರ ಪಾಲಿಕೆ.
(ಬಿಳಿ ಗಡ್ಡ ಇರುವವರು)
ಇನ್ನು ಮಹಾನಗರ ಪಾಲಿಕೆ ಸದಸ್ಯ ಕುಮಾರ್ ಮಾತನಾಡಿ, ಸ್ಮಾರ್ಟ್ ಸಿಟಿ ಅಧಿಕಾರಿಗಳು ಏಕ ಚಕ್ರಾಧಿಪತಿಯ ರೀತಿಯಲ್ಲಿ ಕಾಮಗಾರಿಗಳನ್ನು ನಡೆಸುತ್ತಿದ್ದಾರೆ, ಈ ಹಿಂದಿನ ಜಿಲ್ಲಾಧಿಕಾರಿ ಮೋಹನ್ ಕುಮಾರ್ ಅವರ ಆದೇಶದಂತೆ ನೀವು ಕಾಮಗಾರಿ ನಡೆಸುವ ವಾರ್ಡ್ ನ ಸದಸ್ಯರ ಬಳಿ ಯಾವ ಕಾಮಗಾರಿ ನಡೆಯುತ್ತಿದೆ, ಎಷ್ಟು ದಿನಗಳ ಕಾಲ ನಡೆಯುತ್ತದೆ ಎಂಬ ಎಲ್ಲಾ ಮಾಹಿತಿಗಳನ್ನು ನೀಡಿದ ನಂತರ ಕಾಮಗಾರಿ ಪ್ರಾರಂಭಿಸಬೇಕು. ಆದರೆ ನೀವು ಪಾಲಿಕೆ ಸದಸ್ಯರ ಗಮನಕ್ಕೆ ತರದೆ ತಮಗೆ ಇಷ್ಟ ಬಂದ ರೀತಿಯಲ್ಲಿ ಕಾಮಗಾರಿಗಳನ್ನು ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೈಟ್: ಕುಮಾರ್, ಮಹಾನಗರ ಪಾಲಿಕೆ ಸದಸ್ಯ.
(ಬಿಳಿ ಷರ್ಟ್ ಮತ್ತು ಮುಖಕ್ಕೆ ಮಾಸ್ಕ್ ಹಾಕಿರುವವರು)
ತುಮಕೂರು ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕ ಅಜಯ್ ಮಾತನಾಡಿ, ನಗರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳಿಂದ ಬಹಳಷ್ಟು ಸಮಸ್ಯೆಗಳಾಗಿವೆ ಅದನ್ನು ಒಪ್ಪಿಕೊಳ್ಳುತ್ತೇನೆ, ಹಿರಿಯ ಅಧಿಕಾರಿಗಳಿಂದ ನಮಗೆ ಆದೇಶ ಬಂದಿದ್ದು ನಮ್ಮಲ್ಲಿರುವ ಹಣವನ್ನು ಟೆಂಡರ್ ಮೂಲಕ ಕೆಲಸ ಮಾಡಿಸಬೇಕು ಇಲ್ಲವಾದಲ್ಲಿ ಹಣ ಬಿಡುಗಡೆಯಾಗುವುದಿಲ್ಲ ಎಂದು ಸೂಚನೆ ನೀಡಲಾಗಿದೆ, ಹಾಗಾಗಿ ಸಮಸ್ಯೆ ಉಂಟಾಗಿದ್ದು ಎಲ್ಲಾ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಬೈಟ್: ಅಜಯ್, ವ್ಯವಸ್ಥಾಪಕ ನಿರ್ದೇಶಕ, ಸ್ಮಾರ್ಟ್ ಸಿಟಿ.
(ನೀಲಿ ಬಣ್ಣದ ಬಟ್ಟೆ ಹಾಕಿರುವವರು)

Conclusion:ಸಭೆಯಲ್ಲಿ ಸಂಸದ ಜಿ.ಎಸ್ ಬಸವರಾಜು, ಮಹಾನಗರ ಪಾಲಿಕೆಯ ಮೇಯರ್ ಲಲಿತಾ ರವೀಶ್, ಮಹಾನಗರಪಾಲಿಕೆ ಆಯುಕ್ತ ಶಿವಕುಮಾರ್, ಪಾಲಿಕೆಯ ಸದಸ್ಯರು ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಪಾಲ್ಗೊಂಡಿದ್ದರು.

ವರದಿ
ಸುಧಾಕರ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.