ತುಮಕೂರು: ನಗರದ ಕೆಎಚ್ಬಿ ಕಾಲೋನಿಯಲ್ಲಿ ವಾಸವಾಗಿದ್ದ ಪತಿ, ಪತ್ನಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
40 ವರ್ಷ ವಯಸ್ಸಿನ ಪುರುಷ ಮತ್ತು 29 ವರ್ಷದ ಮಹಿಳೆಯಲ್ಲಿ ಸೋಂಕು ದೃಢವಾಗಿದೆ. ಈ ದಂಪತಿ ಹಿಂದೆ ಸೋಂಕಿನಿಂದ ಮೃತಪಟ್ಟಿದ್ದ ಪಿ.535 ಮತ್ತು ಚಿಕಿತ್ಸೆ ಪಡೆಯುತ್ತಿರುವ ಮೃತನ ಪತ್ನಿ ಪಿ.553 ಜೊತೆ ಸಂಪರ್ಕ ಹೊಂದಿದ್ದರು.
ಕೆಎಚ್ಬಿ ಕಾಲೋನಿಯಲ್ಲಿ ವಾಸವಾಗಿದ್ದ ಮೃತನ ಮನೆಯ ಪಕ್ಕದಲ್ಲಿಯೇ ದಂಪತಿ ವಾಸವಾಗಿದ್ದರು. ಇವರಿಬ್ಬರಿಗೂ ತುಮಕೂರು ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯು ಆರೆಂಜ್ ಝೋನ್ನಲ್ಲಿದ್ದು, ಮೇ.4ರಿಂದ 2 ವಾರಗಳ ಕಾಲ ಲಾಕ್‌ಡೌನ್ ಮುಂದುವರೆಯಲಿದೆ. ವಯೋವೃದ್ಧರು ಮತ್ತು ಸಣ್ಣ ಮಕ್ಕಳು ಮನೆಯಿಂದ ಹೊರಬರಬಾರದು ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.