ತುಮಕೂರು: ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿದ್ದ ಇಬ್ಬರು ಅಧಿಕಾರಿಗಳು ಕಳೆದ ಮೂರು ದಿನಗಳಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸೋಂಕು ತಗುಲಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಸುರೇಶ್ (52) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೇ 9ರಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಿ. ಮಂಜುನಾಥ್ ಮೃತಪಟ್ಟಿದ್ದರು. ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಅಸುನೀಗಿದ್ದರು.
ಕೆಲ ತಿಂಗಳ ಹಿಂದೆಯಷ್ಟೇ ನಿವೃತ್ತರಾಗಿದ್ದ ಡಿಡಿಪಿಐ ಎಂ. ಆರ್ ಕಾಮಾಕ್ಷಿ ಅವರು ಕೂಡ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರು ಮೇ 8ರಂದು ಚಿಕಿತ್ಸೆ ಫಲಕಾರಿಯಾಗದೆ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದರು.
ಓದಿ: ಸೋಂಕಿತ ಮಹಿಳೆಯ ಶವ ಸಾಗಾಟಕ್ಕೆ ಗ್ರಾಮಸ್ಥರ ಹಿಂದೇಟು: ಪಿಪಿಇ ಕಿಟ್ ಧರಿಸಿ ಕೈ ಜೋಡಿಸಿದ ತಹಶೀಲ್ದಾರ್!