ETV Bharat / state

ತುಮಕೂರು : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು.. ಓರ್ವನ ಸ್ಥಿತಿ ಗಂಭೀರ - ಬೈಕ್ ಹಾಗೂ ಪಿಕಪ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತ

ಬೈಕ್​ ಮತ್ತು ಪಿಕಪ್​ ವಾಹನದ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

two-students-died-in-road-accident-at-tumkur
ತುಮಕೂರು : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು..ಓರ್ವನ ಸ್ಥಿತಿ ಗಂಭೀರ
author img

By

Published : Aug 12, 2023, 6:31 PM IST

ತುಮಕೂರು : ಬೈಕ್ ಹಾಗೂ ಪಿಕಪ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಗ್ರಾಮದ ಬಳಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಈಶ್ವರ್ (16) ಯಶ್ವಂತ್ (17) ಎಂದು ಗುರುತಿಸಲಾಗಿದೆ. ರಾಮು ಎಂಬವರ ಸ್ಥಿತಿ ಗಂಭೀರವಾಗಿದೆ. ಈ ವಿದ್ಯಾರ್ಥಿಗಳನ್ನು ಆಂಧ್ರಪ್ರದೇಶದ ರೊದ್ದಂ ಮಂಡಲದ ಚಿನ್ನಿಕೊಡಿಪಲ್ಲಿ ಗ್ರಾಮದವರಾಗಿದ್ದಾರೆ.

ಶನಿವಾರವಾದ ಹಿನ್ನಲೆ ಈ ಮೂವರು ವಿದ್ಯಾರ್ಥಿಗಳು ಪಾವಗಡದ ಶನಿ ಮಹಾತ್ಮ ದೇವಸ್ಥಾನಕ್ಕೆ ಹೊರಟ್ಟಿದ್ದರು. ಈ ವೇಳೆ ಪಾವಗಡ ತಾಲೂಕಿನ ಕಡಮಲಕುಂಟೆ ಗ್ರಾಮದ ಬಳಿ ಇವರ ಬೈಕ್​ಗೆ ಪಿಕಪ್​ ವಾಹನ ಡಿಕ್ಕಿಯಾಗಿದೆ. ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾನೆ. ಗಂಭೀರ ಗಾಯಗೊಂಡ ರಾಮು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Elephant death: ವಿಶ್ವ ಆನೆ ದಿನದಂದೇ ಚಾಮರಾಜನಗರದಲ್ಲಿ ಅನುಮಾನಸ್ಪದ ರೀತಿಯಲ್ಲಿ ಕಾಡಾನೆ ಸಾವು: ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.