ತುಮಕೂರು : ಸಿದ್ದಗಂಗಾ ಮಠದ ವಿದ್ಯಾರ್ಥಿ ಮೇಲೆ ಅಪರಿಚಿತರು ಹಲ್ಲೆ ಮಾಡಿ ಮೊಬೈಲ್ ಕಿತ್ತುಕೊಂಡು ಹೋಗಿರುವ ಘಟನೆ ನಗರದಲ್ಲಿ ನಡೆದಿದೆ. ಸಿದ್ದಗಂಗಾ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿ ಭೀಮಾಶಂಕರ ಹಲ್ಲೆಗೊಳಗಾದವರು.
ಬೆಂಗಳೂರು-ತುಮಕೂರು ರಸ್ತೆಗೆ ಹೊಂದಿಕೊಂಡಿರುವ ಹೆಚ್ಎಂಟಿ ಬಸ್ ನಿಲ್ದಾಣದ ಬಳಿ ಬಸ್ನಿಂದ ಇಳಿದು ಮಠಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಇಲ್ಲಿನ ಅಬರ್ಯಾನ್ ರೆಸಾರ್ಟ್ ಬಳಿ ಸ್ಕೂಟಿಯಲ್ಲಿ ಬಂದ ಮೂವರು ಕಿಡಿಗೇಡಿಗಳು ವಿದ್ಯಾರ್ಥಿ ಭೀಮಾ ಶಂಕರನ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ.
ಈ ವೇಳೆ ವಿದ್ಯಾರ್ಥಿ ಮೊಬೈಲ್ ಕೊಡಲು ನಿರಾಕರಿಸಿದಾಗ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಈ ವೇಳೆ ವಿದ್ಯಾರ್ಥಿ ಕೈಗೆ ಗಾಯವಾಗಿದೆ.
ಹಲ್ಲೆಗೊಳಗಾದ ವಿದ್ಯಾರ್ಥಿ ವಿಜಯಪುರ ಮೂಲದ ಭೀಮಾಶಂಕರ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಠದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸಂಬಂಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ