ETV Bharat / state

ಶಿವಕುಮಾರ ಶ್ರೀಗೆ ಭಾರತ ರತ್ನ ನೀಡಿ: ರೈಲ್ವೆ ಟ್ರ್ಯಾಕ್ ಮೇಲೆ ಕುಳಿತು ವಾಟಾಳ್ ಪ್ರತಿಭಟನೆ

author img

By

Published : Dec 19, 2020, 5:10 PM IST

ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಬೇಕು ಎಂದು ಆಗ್ರಹಿಸಿ ಇಂದು ತುಮಕೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರೈಲ್ವೆ ಟ್ರ್ಯಾಕ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.

Vatal Nagaraj protest
ವಾಟಾಳ್ ಪ್ರತಿಭಟನೆ

ತುಮಕೂರು : ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಸಿದ್ದಗಂಗಾ ಮಠದ ಸಮೀಪದ ರೈಲ್ವೆ ಟ್ರ್ಯಾಕ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್

ಸುಮಾರು ಅರ್ಧ ಗಂಟೆಗಳ ಕಾಲ ರೈಲ್ವೆ ಟ್ರ್ಯಾಕ್ ಮೇಲೆ ತಮ್ಮ ಬೆಂಬಲಿಗರೊಂದಿಗೆ ಧರಣಿ ನಡೆಸಿದರು. ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಬಳಸಿಕೊಂಡು ಅನೇಕ ಮಂದಿ ಉನ್ನತ ಮಟ್ಟದಲ್ಲಿ ಅಧಿಕಾರವನ್ನು ಪಡೆದಿದ್ದಾರೆ. ಅನೇಕ ವರ್ಷಗಳಿಂದ ಬೇಡಿಕೆಯಲ್ಲಿರುವ ಶ್ರೀ ಶಿವಕುಮಾರ ಸ್ವಾಮಿಜಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ ಆದರೆ ಈ ಬಗ್ಗೆ ಯಾರೂ ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಿಗಳ ಮೇಲೆ ಒತ್ತಡ ಹೇರಿ ಭಾರತರತ್ನ ಪ್ರಶಸ್ತಿಯನ್ನು ಕೊಡಿಸಬೇಕು ಸಾಧ್ಯವಾದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಬೇಕು ಎಂದು ಆಗ್ರಹಿಸಿದರು.

ಸಂಸದರು ಕೂಡ ರಾಜೀನಾಮೆ ನೀಡುವ ಮೂಲಕ ಪ್ರಧಾನಿಯವರ ಮೇಲೆ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಹೇಳಿದರು. ಶೀಘ್ರದಲ್ಲೇ ಸ್ವಾಮೀಜಿಯವರಿಗೆ ಭಾರತರತ್ನ ನೀಡಬೇಕೆಂದು ಒತ್ತಾಯಿಸಿ ಹೋರಾಟದ ರೂಪುರೇಷೆ ತಯಾರಿಸಲಾಗುವುದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.