ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ದೊಡ್ಡ ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಚಾವಣಿ ಹಾಗೂ ಕಂಬಗಳು ಧರೆಗುರುಳಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
40 ವರ್ಷ ಹಳೆಯದಾದ ಕಟ್ಟದಲ್ಲಿಯೇ ವಿದ್ಯಾರ್ಥಿಗಳಿಗೆ ಪಾಠ ಹೇಳಲಾಗುತ್ತಿತ್ತು. ಎಂದಿನಂತೆ ಶಾಲೆಗೆ ಬಂದ ವಿದ್ಯಾರ್ಥಿಗಳು ಶಿಥಿಲಗೊಂಡ ಕೊಠಡಿಯಲ್ಲಿಯೇ ಕುಳಿತುಕೊಂಡಿದ್ದರು. ಕುಸಿಯುವ ಮುನ್ಸೂಚನೆ ತಿಳಿಯುತ್ತಿದ್ದಂತೆ ಕೊಠಡಿಯಿಂದ ವಿದ್ಯಾರ್ಥಿಗಳು ಹೊರಗೆ ಓಡಿ ಬಂದಿದ್ದಾರೆ. ಸಣ್ಣ ಪುಟ್ಟ ಗಾಯಗೊಳೊಂದಿಗೆ ಮಕ್ಕಳು ಪಾರಾಗಿದ್ದಾರೆ.
ಸ್ಥಳಕ್ಕೆ ತಹಶಿಲ್ದಾರ್ ತೇಜಸ್ವಿನಿ ಮತ್ತು ಚಿಕ್ಕನಾಯಕನಹಳ್ಳಿ ಬಿಇಒ ಕಾತ್ಯಾಯಿನಿ ಭೇಟಿ ನೀಡಿದ್ದರು. ಸಾರ್ವಜನಿಕರು ಹಾಗೂ ಮಕ್ಕಳ ಪಾಲಕರು ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಡಿಡಿಪಿಒ ಕಚೇರಿಗೆ ಈ ಬಗ್ಗೆ ಅನೇಕ ಬಾರಿ ಮನವಿ ನೀಡಲಾಗಿದೆ. ಯಾವ ಅಧಿಕಾರಿಗಳು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ದುರಸ್ತಿ ಕಾರ್ಯ ಕೈಗೊಂಳ್ಳುವುದಾಗಿ ಅಧಿಕಾರಿಗಳು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.