ETV Bharat / state

ತುಮಕೂರು: ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರರ ರಕ್ಷಿಸಿದ ಗ್ರಾಮಸ್ಥರು - ತುಮಕೂರಿನ ಮಧುಗಿರಿ ತಾಲೂಕಿನ ಹಳ್ಳದಲ್ಲಿ ಕೊಚ್ಚಿಹೋದ ಸವಾರರ ರಕ್ಷಣೆ

ತುಮಕೂರು ಜಿಲ್ಲೆಯಲ್ಲಿ ನಿರಂತರವಾಗಿ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರರನ್ನು ರಕ್ಷಿಸಿದ ಗ್ರಾಮಸ್ಥರು..

author img

By

Published : Aug 2, 2022, 10:48 PM IST

ತುಮಕೂರು: ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದು ಕೊಚ್ಚಿ ಹೋಗುತ್ತಿದ್ದ ಇಬ್ಬರು ದ್ವಿಚಕ್ರ ವಾಹನ ಸವಾರರನ್ನು ಗ್ರಾಮಸ್ಥರು ಹಗ್ಗ ಹಾಕಿ ಎಳೆದು ರಕ್ಷಿಸಿದರು. ಈ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತೋಣಚಗೊಂಡನಹಳ್ಳಿ ಸಮೀಪ ನಡೆದಿದೆ.

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರರನ್ನು ರಕ್ಷಿಸಿದ ಗ್ರಾಮಸ್ಥರು..

ಜಿಲ್ಲೆಯಲ್ಲಿ ನಿರಂತರವಾಗಿ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿವೆ. ಮಧುಗಿರಿ ತಾಲೂಕಿನಲ್ಲಿಯೂ ಕೂಡ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇದರಿಂದ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದ ಇಬ್ಬರು ಬೈಕ್ ಸವಾರರು ಹಳ್ಳದ ನೀರು ದಾಟಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಕೊಚ್ಚಿ ಹೋಗಿದ್ದಾರೆ.

ಸಮೀಪದಲ್ಲಿದ್ದ ಗ್ರಾಮಸ್ಥರು ಇವರ ಕೂಗಾಟ ಕಂಡು ಸ್ಥಳಕ್ಕೆ ಧಾವಿಸಿದ್ದಾರೆ. ಕೊಚ್ಚಿ ಹೋಗುತ್ತಿದ್ದ ಹಳ್ಳದ ಸಮೀಪ ಇಕ್ಕೆಲಗಳಲ್ಲಿದ್ದ ಮರ-ಗಿಡಗಳನ್ನು ಹಿಡಿದು ಕೂಗುತ್ತಿದ್ದ ಸವಾರರನ್ನು ರಕ್ಷಿಸಲು ಗ್ರಾಮಸ್ಥರು ಹಗ್ಗ ಬಳಸಿ ಪ್ರಾಣಾಪಾಯದಿಂದ ಪಾರು ಮಾಡಿದರು.

ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಹಾನಿ, ಮಂಕಿಪಾಕ್ಸ್ ಮುನ್ನೆಚ್ಚರಿಕೆ: ಮಹತ್ವದ ಸಭೆ ನಡೆಸಲಿರುವ ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.