ETV Bharat / state

ನಿಷೇಧಾಜ್ಞೆ ಉಲ್ಲಂಘನೆ : ವಿದ್ಯಾರ್ಥಿನಿಯರ ಮೇಲೆ ಕೇಸು ದಾಖಲಿಸಿದ ಪ್ರಾಂಶುಪಾಲರು - case filed against students

ಪ್ರಾಂಶುಪಾಲರ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಆದರೆ, ಯಾವುದೇ ವಿದ್ಯಾರ್ಥಿಗಳ ಹೆಸರನ್ನು ಉಲ್ಲೇಖ ಮಾಡಿಲ್ಲ ಎಂದು ತಿಳಿದು ಬಂದಿದೆ..

Violation of curfew  Principal  filed a case against students
ನಿಷೇಧಾಜ್ಞೆ ಉಲ್ಲಂಘನೆ
author img

By

Published : Feb 18, 2022, 1:31 PM IST

ತುಮಕೂರು : ಹಿಜಾಬ್-ಕೇಸರಿ ಶಾಲು ವಿವಾದ ರಾಜ್ಯದಾದ್ಯಂತ ಹರಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಶಾಲಾ-ಕಾಲೇಜುಗಳ ಬಳಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ನಡುವೆ ನಿಷೇಧಾಜ್ಞೆ ಉಲ್ಲಂಘಿಸಲಾಗಿದೆ ಎಂದು 15 ಮಂದಿ ವಿದ್ಯಾರ್ಥಿನಿಯರ ವಿರುದ್ಧ ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಗರದ ಎಂಪ್ರೆಸ್ ಕಾಲೇಜಿನ ಬಳಿ ಗುಂಪುಗೂಡಿದ್ದ ವಿದ್ಯಾರ್ಥಿನಿಯರ ವಿರುದ್ಧ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಾಂಶುಪಾಲರ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಆದರೆ, ಯಾವುದೇ ವಿದ್ಯಾರ್ಥಿಗಳ ಹೆಸರನ್ನು ಉಲ್ಲೇಖ ಮಾಡಿಲ್ಲ ಎಂದು ತಿಳಿದು ಬಂದಿದೆ.

ಓದಿ : ಶಸ್ತ್ರಚಿಕಿತ್ಸೆ ನಂತರ ಮಗು ಸಾವು; ಕಿಮ್ಸ್ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.